ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿ.ಕೆ. ಹರಿಪ್ರಸಾದ್ ಪದಗ್ರಹಣಕ್ಕೆ ಸಿದ್ಧತೆ ನಡಿತಾ ಇದೆ - ಸಲೀಂ ಅಹ್ಮದ್

ಹುಬ್ಬಳ್ಳಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮ ಸಕಲ ಸಿದ್ಧತೆ ನಡೆಸಲಾಗಿದ್ದು. ದೊಡ್ಡ ಪ್ರಮಾಣದಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ವಿಧಾನ ಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್‌ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಶಾಸಕರು, ಸಂಸದರು, ಮಾಜಿ ಸಚಿವರು, ಜಿಲ್ಲಾವಾರು ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, ಜೂನ್ 21ರಂದು ಅರಮನೆ ಮೈದಾನದಲ್ಲಿ ಪದಗ್ರಹಣ ಸಮಾರಂಭ ನಡೆಸಲು ನಿರ್ಧಾರ ಮಾಡಲಾಗಿದೆ.

ಇದೇ ವೇಳೆ ನಿರ್ಗಮಿತ ಕೆಪಿಸಿಸಿ ಅಧ್ಯಕ್ಷ, ಸಿಎಂ ಡಿ.ಕೆ. ಶಿವಕುಮಾರ್‌ಗೆ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನಾ ಸಮಾರಂಭ ಸಹ ಏರ್ಪಡಿಸಲಾಗಿದೆ ಎಂದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/06/2026 03:18 pm

Cinque Terre

15.97 K

Cinque Terre

0

ಸಂಬಂಧಿತ ಸುದ್ದಿ