ಶಿರಸಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಹುಬ್ಬಳ್ಳಿ ರಸ್ತೆಯ ರಾಷ್ಟ್ರೀಯ ಹೆದ್ದಾರಿಯ ಸಮೀಪದ ದೊಡ್ಡರು ಕ್ರಾಸ್ ಬಳಿ ಶನಿವಾರ ನಡೆದಿದೆ.
ಮೃತರನ್ನು ಬುಗುಡಿಕೊಪ್ಪ ಗ್ರಾಮದ ಅನಿಲ್ ನಾಯ್ಕ (30) ಎಂದು ಗುರುತಿಸಲಾಗಿದೆ. ಹಾವೇರಿ-ಶಿರಸಿ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಅನಿಲ್ ನಾಯ್ಕ ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯ ಗ್ರಾಮಸ್ಥರು ತಕ್ಷಣವೇ ಅಂಬುಲೆನ್ಸ್ ಮೂಲಕ ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾನೆ
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಶಿರಸಿ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದರು.
ಘಟನೆ ಸಂಬಂಧ ಶಿರಸಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆ
ಮುಂದುವರೆದಿದೆ.
Kshetra Samachara
14/06/2026 03:24 pm
LOADING...