ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಜರಂಗದಳ ಮುಖಂಡನ ಮೇಲೆ ಬಿತ್ತು ಕೇಸ್

ಧಾರವಾಡ: ಗೃಹ ಸಚಿವ ಪ್ರಿಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದ ಬಜರಂಗದಳ ಮುಖಂಡ ಶಿವಾನಂದ ಸತ್ತಿಗೇರಿ ಮೇಲೆ ಅಟ್ರಾಸಿಟಿ ದೂರು ದಾಖಲಾಗಿದೆ.

ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದ್ದ ಲವ್ ಜಿಹಾದ್ ಹಾಗೂ ಬಾಲಕಿ ಆತ್ಮಹತ್ಯೆ ಪ್ರಕರಣವನ್ನು ಖಂಡಿಸಿ ಬಜರಂಗದಳ ಸೇರಿದಂತೆ ಇತರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗರಗ ಗ್ರಾಮದ ಗಾಂಧಿ ವೃತ್ತದಲ್ಲಿ ಮೊನ್ನೆಯಷ್ಟೇ ಪ್ರತಿಭಟನೆ ನಡೆಸಿದ್ದರು.

ಈ ವೇಳೆ ವಾಗ್ದಾಳಿ ನಡೆಸಿದ್ದ ಶಿವಾನಂದ ಸತ್ತಿಗೇರಿ, ದಲಿತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಕುಟುಂಬಕ್ಕೆ ಅನ್ಯಾಯವಾಗಿದೆ. ಎಲ್ಲಿದ್ದಿಯಾ ಪ್ರಿಯಾಂಕ ಖರ್ಗೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು.

ಶಿವಾನಂದ ಸತ್ತಿಗೇರಿ ಪ್ರಿಯಾಂಕ್ ಖರ್ಗೆ ವಿರುದ್ಧ ಮಾತನಾಡಿದ್ದನ್ನೇ ವಿರೋಧಿಸಿ ಇದೀಗ ಖರ್ಗೆ ಅವರ ಅಭಿಮಾನಿ ಪರಮೇಶ್ವರ ಕಾಳೆ ಎಂಬುವವರು ಧಾರವಾಡ ಉಪನಗರ ಠಾಣೆಯಲ್ಲಿ ಸತ್ತಿಗೇರಿ ವಿರುದ್ಧ ಅಟ್ರಾಸಿಟಿ ದೂರು ದಾಖಲಿಸಿದ್ದಾರೆ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/06/2026 04:10 pm

Cinque Terre

41.63 K

Cinque Terre

8

ಸಂಬಂಧಿತ ಸುದ್ದಿ