ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ರಾಜ್ಯದಲ್ಲಿ ಜಿಲ್ಲೆಗಳನ್ನ ಮಂತ್ರಿಗಳು ಮರೆತಿದ್ದಾರೆ - MLC ಎನ್. ರವಿಕುಮಾರ್ ಲೇವಡಿ

ಚಿತ್ರದುರ್ಗ: ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹೊಸದಲ್ಲ, ಕೇವಲ ಮುಖ್ಯಮಂತ್ರಿ ಮಾತ್ರ ಬದಲಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, ಸದ್ಯ 14 ಮಂದಿ ಸಚಿವರಾಗಿದ್ದು, ಇನ್ನೂ 20 ಸಚಿವ ಸ್ಥಾನಗಳಿಗಾಗಿ 80ಕ್ಕೂ ಹೆಚ್ಚು ಶಾಸಕರು ಆಕಾಂಕ್ಷಿಗಳಾಗಿ ಸಾಲಿನಲ್ಲಿ ನಿಂತಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರೂ, ರೈತರಿಗೆ ಬೀಜ ಮತ್ತು ಗೊಬ್ಬರದ ಕೊರತೆ ಎದುರಾಗಿದೆ ಎಂದು ರವಿಕುಮಾರ್ ಹೇಳಿದರು. ಆದರೆ, ಯಾವೊಬ್ಬ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ, ಅವರನ್ನು ಗೂಗಲ್‌ನಲ್ಲಿ ಹುಡುಕುವಂತಹ ಪರಿಸ್ಥಿತಿ ಬಂದಿದೆ. ರೈತರ ಗೋಳು ಕೇಳುವವರಿಲ್ಲದಂತಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿಗಳು ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಮುಂದಾಗಿರುವ ನಿರ್ಧಾರಕ್ಕೂ ರವಿಕುಮಾರ್ ತೀವ್ರ ವಿರೋಧ ವ್ಯಕ್ತಪಡಿಸಿದರು.

Edited By : PublicNext Desk
Kshetra Samachara

Kshetra Samachara

14/06/2026 05:54 pm

Cinque Terre

920

Cinque Terre

0

ಸಂಬಂಧಿತ ಸುದ್ದಿ