ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಖಿಲೇಶ್ ಯಾದವ್ ಪುತ್ರಿಗೆ ಕೀಳು ಕಾಮೆಂಟ್: ಸಿಎಂ ಯೋಗಿಯಿಂದ ಕಠಿಣ ಕ್ರಮಕ್ಕೆ ಸೂಚನೆ

ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥಅಖಿಲೇಶ್ ಯಾದವ್ ಅವರ ಪುತ್ರಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಹಾಕಲಾಗುತ್ತಿರುವುದನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಅಲ್ಲದೆ, ಇಂತಹ ಕಾಮೆಂಟ್‌ಗಳನ್ನು ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಅಂಜಗಢದಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಯೋಗಿ, "ಯಾರ ಮನೆ ಹೆಣ್ಣು ಮಕ್ಕಳಾದರೂ ಸರಿ, ಈ ರೀತಿ ಸಾರ್ವಜನಿಕ ಚರ್ಚೆಯ ವಿಷಯವಾಗಬಾರದು.

ಹೆಣ್ಣುಮಕ್ಕಳ ವಿರುದ್ಧದ ಇಂತಹ ಆಕ್ಷೇಪಾರ್ಹ ಮತ್ತು ಅಸಭ್ಯ ಕಾಮೆಂಟ್‌ಗಳನ್ನು ಹಾಕುವವರನ್ನು ಕ್ಷಮಿಸಲು ಸಾಧ್ಯವಿಲ್ಲ. ನಾವು ಎಲ್ಲರ ಮಗಳು, ಎಲ್ಲರ ಸಹೋದರಿಯೂ ಒಂದೇ ಎಂಬ ಮೌಲ್ಯಗಳೊಂದಿಗೆ ಬೆಳೆದಿದ್ದೇವೆ. ಇದರಲ್ಲಿ ಯಾವುದೇ ಭೇದಭಾವ ಮಾಡಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಅಖಿಲೇಶ್ ಯಾದವ್ ಅವರ ಪುತ್ರಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಕಾಮೆಂಟ್‌ಗಳು ಬರುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದ ಯೋಗಿ, "ಅಖಿಲೇಶ್ ಜೀ, ನೀವು ಇತರರಿಗೆ ಸಲಹೆ ನೀಡುತ್ತೀರಿ. ಆದರೆ ನಿಮ್ಮ ಬೆಂಬಲಿಗರು ಮತ್ತು ಕಾರ್ಯಕರ್ತರು ಸಭ್ಯ ಭಾಷೆಯನ್ನು ಬಳಸುವಂತೆ ನೋಡಿಕೊಳ್ಳಬೇಕು. ಒಂದು ವೇಳೆ ನಿಮಗೆ ಅರ್ಥ ಮಾಡಿಸಲು ಸಾಧ್ಯವಾಗದಿದ್ದರೆ, ನಮ್ಮ ಬಳಿ ಕಳುಹಿಸಿಕೊಡಿ. ನಾವು ಅವರಿಗೆ ಅರ್ಥ ಮಾಡಿಸುವ ರೀತಿಯಲ್ಲಿ ಮಾಡುತ್ತೇವೆ" ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.

Edited By : Abhishek Kamoji
PublicNext

PublicNext

14/06/2026 07:01 pm

Cinque Terre

19.68 K

Cinque Terre

0

ಸಂಬಂಧಿತ ಸುದ್ದಿ