ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಧ್ಯುತಿಧಾರಾ–2026 ಕಾರ್ಯಕ್ರಮ ಉದ್ಘಾಟಿಸಿದ ಡಾ. ವಿಎಸ್‌ವಿ ಪ್ರಸಾದ್

ಧಾರವಾಡ: ಧಾರವಾಡದ ಸತ್ತೂರಿನ ಶ್ರೀ ಸತ್ಯ ಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಅಂಡ್ ಹಾಸ್ಪಿಟಲ್ ಕಾಲೇಜಿನಲ್ಲಿ, 2020ನೇ ಬ್ಯಾಚ್ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ "ಧ್ಯುತಿಧಾರಾ–2026" ಅದ್ಧೂರಿಯಾಗಿ ನಡೆದಿದ್ದು, ಈ ಕಾರ್ಯಕ್ರಮವನ್ನು ಸ್ವರ್ಣ ಗ್ರೂಪ್ ಆಫ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ವಿಎಸ್‌ವಿ ಪ್ರಸಾದ್ ಅವರು ಉದ್ಘಾಟನೆ ಮಾಡಿದರು.

ಶ್ರೀ ಬಸವೇಶ್ವರ ಗ್ರಾಮೀಣ ಶಿಕ್ಷಣ ಮತ್ತು ಅಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಸತ್ಯ ಸಾಯಿ ಹೋಮಿಯೋಪಥಿಕ್ ಮೆಡಿಕಲ್ ಸೈನ್ಸ್ ಅಂಡ್ ಹಾಸ್ಪಿಟಲ್ ಕಾಲೇಜಿನ ವತಿಯಿಂದ,ಧಾರವಾಡದ ಸತ್ತೂರಿನ ಎಸ್‌ಡಿಎಂ ಕಲಾಕ್ಷೇತ್ರದಲ್ಲಿ ಧ್ಯುತಿಧಾರಾ–2026 ಪದವಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಡಾ. ವೀರಣ್ಣ ಮತ್ತಿಕಟ್ಟಿ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಡಾ. ವಿಎಸ್‌ವಿ ಪ್ರಸಾದ್ ಅವರು ಆಗಮಿಸಿದ್ದರು. ವೈದ್ಯಕೀಯ ಶಿಕ್ಷಣ ಯಶಸ್ವಿಯಾಗಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು,

ವೈದ್ಯಕೀಯ ಕ್ಷೇತ್ರಕ್ಕೆ ಹೊಸ ತಲೆಮಾರಿನ ವೈದ್ಯರನ್ನು ಪರಿಚಯಿಸುವ ಈ ಪದವಿ ಪ್ರದಾನ ಸಮಾರಂಭವು ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಮೈಲಿಗಲ್ಲಾಗಲಿದ್ದು, ಧಾರವಾಡದಲ್ಲಿ ಶಿಕ್ಷಣ ಕ್ಷೇತ್ರದ ಪ್ರಮುಖ ಕಾರ್ಯಕ್ರಮವಾಗಿ ಗುರುತಿಸಿಕೊಳ್ಳಲಿದೆ ಎಂದು ಗಣ್ಯರು ಶುಭ ಹಾರೈಸಿದ್ದರು.

Edited By : Manjunath H D
Kshetra Samachara

Kshetra Samachara

14/06/2026 08:43 pm

Cinque Terre

16.22 K

Cinque Terre

0

ಸಂಬಂಧಿತ ಸುದ್ದಿ