ಧಾರವಾಡ: ಕಾರ್ಯಾಗಾರಗಳು ಕಾನೂನು ವಿದ್ಯಾರ್ಥಿಗಳ ಕೌಶಲ್ಯ ಹೆಚ್ಚಿಸುವುದಕ್ಕೆ ಪೂರಕವಾಗಿವೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಎಚ್.ಪಿ. ಸಂದೇಶ ಹೇಳಿದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಧಾರವಾಡ ವಲಯ ವ್ಯಾಪ್ತಿಯ ಕಾನೂನು ಮಹಾವಿದ್ಯಾಲಯಗಳ ವತಿಯಿಂದ ನಡೆದ ಸಾಮಾಜಿಕ ನ್ಯಾಯಕ್ಕಾಗಿ ಕಾನೂನು ವಿದ್ಯಾರ್ಥಿಗಳ ಜವಾಬ್ದಾರಿ' ಕುರಿತ 4ನೇ ವಲಯ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕಾನೂನು ಮಹಾವಿದ್ಯಾಲಯಗಳಲ್ಲಿ ಕಲಿತರೆ ಸಾಲದು, ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸುವ ಕಲೆಯನ್ನು ಸಿದ್ಧಿಸಿಕೊಳ್ಳಬೇಕು. ಕೇವಲ ಹಣ ಗಳಿಕೆಗೆ ಆದ್ಯತೆ ನೀಡದೇ ಜನಸಾಮಾನ್ಯರಿಗೆ ನ್ಯಾಯ ದೊರೆಯುವಂತೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಅನು ಶಿವರಾಮನ್, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಎಸ್. ಸುನೀಲ್ ದತ್ತ ಯಾದವ್, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಯು.ಕೃಷ್ಣರಾಜ್, ಧಾರವಾಡ ಜಿಲ್ಲಾ ಪ್ರಧಾನ ನ್ಯಾಯಾಧೀಶ ವಿಜಯ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಸಿ. ಬಸವರಾಜು, ಎಚ್. ಶಶಿಧರ್ ಶೆಟ್ಟಿ ಇದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/06/2026 09:55 pm
LOADING...