ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸಂಡೆ ಬಜಾರ್ ವ್ಯಾಪಾರಿಗಳ ಎತ್ತಂಗಡಿಗೆ ಮುಂದಾದ ಪಾಲಿಕೆ- ಬೀದಿಬದಿ ವ್ಯಾಪಾರಿಗಳಿಂದ ಪ್ರತಿಭಟನೆ

ಮಂಗಳೂರು: ಸಂಡೆ ಬಜಾರ್ ವ್ಯಾಪಾರಿಗಳನ್ನು ತೆರವುಗೊಳಿಸಲು ಮುಂದಾದ ನಗರಪಾಲಿಕೆ ಅಧಿಕಾರಿಗಳು ಬಡ ಬೀದಿ ವ್ಯಾಪಾರಿಗಳ ಸರಕುಗಳನ್ನು ವಶಪಡಿಸಲು ಲಾರಿಗಳನ್ನು ತಂದು ಕಾರ್ಯಾಚರಣೆ ನಡೆಸಲು ಮುಂದಾಗಿದ್ದಾರೆ.

ಈ ವೇಳೆ ಬೀದಿಬದಿ ವ್ಯಾಪಾರಿಗಳು ಪಾಲಿಕೆಯ ಮುಂಭಾಗ ಕುಳಿತು ತೀವ್ರ ಪ್ರತಿಭಟನೆ ನಡೆಸಿದರು. ಪಾಲಿಕೆಯು ಬೀದಿಬದಿ ವ್ಯಾಪಾರದ ನಿಯಮನುಸಾರ ಕಾರ್ಯಾಚರಣೆ ಮಾಡಬೇಕೆಂದು ಪಟ್ಟು ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೀದಿಬದಿ ವ್ಯಾಪಾರಿಗಳ ದಿಢೀರ್ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದರು. ಬೀದಿಬದಿ ವ್ಯಾಪಾರಸ್ಥರ ಸಂಘಟನೆಗಳ ಪ್ರಮುಖರಾದ ಅಬ್ದುಲ್ ರಹಿಮಾನ್, ಸಂತೋಷ್ ಆರ್ ಎಸ್, ಮುಜಾಫರ್ ಅಹ್ಮದ್, ಮೊಹಮ್ಮದ್ ಮುಸ್ತಫಾ, ವಿಜಯ್ ಜೈನ್, ಎಂ.ಎನ್ ಶಿವಪ್ಪ,ನೌಶಾದ್ ಉಳ್ಳಾಲ, ಹಂಝ ಮೊಹಮ್ಮದ್ ಪ್ರತಿಭಟನೆಯಲ್ಲಿದ್ದರು.

Edited By : Manjunath H D
PublicNext

PublicNext

14/06/2026 09:58 pm

Cinque Terre

8.31 K

Cinque Terre

0

ಸಂಬಂಧಿತ ಸುದ್ದಿ