ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಗಣೇಶ್ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.
ಕಳೆದ ವಾರ ಸ್ವಗ್ರಾಮ ಸಿದ್ದಯ್ಯನಪುರದಿಂದ ಗುಂಡ್ಲುಪೇಟೆಗೆ ಕರ್ತವ್ಯಕ್ಕೆಂದು ಬೈಕ್‍ನಲ್ಲಿ ಬರುತ್ತಿದ್ದ ವೇಳೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದಲ್ಲಿ ಅಡ್ಡ ಬಂದ ನಾಯಿಗೆ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸುವ ಪ್ರಯತ್ನದಲ್ಲಿ ಬೈಕ್‍ನಿಂದ ಕೆಳಗೆ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದರು.
PublicNext
14/06/2026 10:34 pm
LOADING...