ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಲ್ಲೂರು: ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ

ಉಡುಪಿ : ಕರ್ನಾಟಕದ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ಭೇಟಿ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಮೂಕಾಂಬಿಕೆ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಂಬಾನಿ ಕುಟುಂಬದ ಗುರೂಜಿಯ ಜೊತೆ ಆಗಮಿಸಿ ದರ್ಶನ

ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನಕ್ಕೆ ಆಗಮಿಸಿದ ಅನಂತ್ ಅಂಬಾನಿ ವಿಶೇಷ ಪೂಜೆ ಸಲ್ಲಿಸಿದರು. ಮೂಕಾಂಬಿಕಾ ಸನ್ನಿಧಾನದಲ್ಲಿ ಪೂಜೆ ಕೈಗೊಂಡರು. ದೇಗುಲಕ್ಕೆ ಆಗಮಿಸಿದ ಅನಂತ್ ಅಂಬಾನಿಗೆ ದೇವಾಲಯದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.

ಜೂನ್ 13ರಂದು ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ದಿನಾಂಕ ನಿಗದಿಯಾಗಿತ್ತು. ಆದರೆ ಮುಂಬೈನಲ್ಲಿ ಭಾರಿ ಮಳೆ ಕಾರಣದಿಂದ ಪ್ರವಾಸ ಮುಂದೂಡಲಾಗಿತ್ತು. ಇಂದು ಸಂಜೆ ವೇಳೆಗೆ ಕೊಲ್ಲೂರು ಮೂಕಾಂಬಿಕೆ ತಲುಪಿದ ಅನಂತ್ ಅಂಬಾನಿ ದೇವಿ ದರ್ಶನ ಪಡೆದಿದ್ದಾರೆ.

Edited By : Manjunath H D
PublicNext

PublicNext

14/06/2026 10:53 pm

Cinque Terre

18.68 K

Cinque Terre

0

ಸಂಬಂಧಿತ ಸುದ್ದಿ