ಬೀದರ್:- ಬೀದರ್ ತಾಲ್ಲೂಕಿನ ಮನ್ನಾಖೇಲಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ವೈದ್ಯಕೀಯ ಸೇವೆಗಳು, ತುರ್ತು ಚಿಕಿತ್ಸಾ ಸೌಲಭ್ಯಗಳು ಹಾಗೂ ಸಿಬ್ಬಂದಿಯ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಿದರು.ಇತ್ತೀಚೆಗೆ ಆಸ್ಪತ್ರೆಯಲ್ಲಿ ಹೆರಿಗೆ ಪಡೆದ ಮಹಿಳೆಯೊಬ್ಬರು ಹೆರಿಗೆ ನಂತರ ತೀವ್ರ ರಕ್ತಸ್ರಾವಕ್ಕೆ ಒಳಗಾಗಿ, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮೃತಪಟ್ಟಿರುವ ಘಟನೆ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿನ ಚಿಕಿತ್ಸೆ ವ್ಯವಸ್ಥೆ, ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಘಟನೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಿಸಿದ ವೈದ್ಯರು ಹಾಗೂ ಸಿಬ್ಬಂದಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ಸೂಚನೆ ನೀಡಿದರು.ಇಂತಹ ದುರ್ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಆಸ್ಪತ್ರೆಯ ತುರ್ತು ಚಿಕಿತ್ಸಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವುದರ ಜೊತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
PublicNext
15/06/2026 07:15 am