ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ : ಜಗತ್ತಿಗೆ ತೈಲ ಬಿಕ್ಕಟ್ಟಿನ ಆತಂಕ ದೂರ!

ನವದೆಹಲಿ: ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ದೀರ್ಘಕಾಲದ ಸಂಘರ್ಷಕ್ಕೆ ಕೊನೆಗೂ ತೆರೆಬಿದ್ದಿದೆ. ಕಳೆದ 100ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿದ್ದ ಭೀಕರ ಯುದ್ಧ ಮತ್ತು ರಾಜತಾಂತ್ರಿಕ ಹಗ್ಗಜಗ್ಗಾಟಕ್ಕೆ ಅಂತ್ಯ ಹಾಡಿ, ಉಭಯ ದೇಶಗಳ ನಡುವೆ ಶಾಂತಿ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಮಹತ್ವದ ಬೆಳವಣಿಗೆಯು ಇಡೀ ಜಗತ್ತನ್ನು ತೈಲ ಬಿಕ್ಕಟ್ಟಿನ ಆತಂಕದಿಂದ ಮುಕ್ತಗೊಳಿಸಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ 'ಟ್ರೂತ್ ಸೋಷಿಯಲ್' ಖಾತೆಯಲ್ಲಿ ಈ ಶುಭ ಸುದ್ದಿಯನ್ನು ಹಂಚಿಕೊಂಡಿದ್ದಾರೆ. "ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಜೊತೆಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು! ನಾನು ಇಂದಿನಿಂದ ಹಾರ್ಮುಜ್ ಜಲಸಂಧಿಯನ್ನು ಟೋಲ್-ಮುಕ್ತವಾಗಿ ಮುಕ್ತಗೊಳಿಸಲು ಸಂಪೂರ್ಣ ಅಧಿಕಾರ ನೀಡುತ್ತಿದ್ದೇನೆ. ಹಾಗೆಯೇ, ಅಮೆರಿಕ ನೌಕಾಪಡೆಯ ದಿಗ್ಬಂಧನವನ್ನು ತಕ್ಷಣವೇ ತೆಗೆದುಹಾಕಲು ಆದೇಶಿಸುತ್ತಿದ್ದೇನೆ. ವಿಶ್ವದ ಹಡಗುಗಳೇ, ನಿಮ್ಮ ಇಂಜಿನ್‌ಗಳನ್ನು ಸ್ಟಾರ್ಟ್ ಮಾಡಿ. ತೈಲವು ಮುಕ್ತವಾಗಿ ಹರಿಯಲಿ!" ಎಂದು ಟ್ರಂಪ್ ಬರೆದುಕೊಂಡಿದ್ದಾರೆ.

ಫೆಬ್ರವರಿ 28ರಂದು ಆರಂಭವಾಗಿದ್ದ ಈ ಯುದ್ಧದಿಂದಾಗಿ ಹೊರ್ಮುಝ್ ಜಲಸಂಧಿ ಬಂದ್ ಆಗಿತ್ತು. ಈಗ ಇರಾನ್ ಕೂಡ ಈ ಒಪ್ಪಂದವನ್ನು ಖಚಿತಪಡಿಸಿದ್ದು, ಇಂದು ರಾತ್ರಿಯಿಂದಲೇ ಹೊರ್ಮುಝ್ ಮುಕ್ತಗೊಳ್ಳಲಿದೆ ಎಂದು ತಿಳಿಸಿದೆ.

ಅಮೆರಿಕ ಮತ್ತು ಇರಾನ್ ನಡುವಿನ ಈ ಸಂಘರ್ಷವನ್ನು ತಣ್ಣಗಾಗಿಸಲು ಪಾಕಿಸ್ತಾನ ಪ್ರಮುಖ ಮಧ್ಯಸ್ಥಿಕೆ ವಹಿಸಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, "ವ್ಯಾಪಕ ಮಾತುಕತೆಗಳ ನಂತರ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಏರ್ಪಟ್ಟಿದೆ ಎಂದು ಘೋಷಿಸಲು ಸಂತೋಷವಾಗುತ್ತಿದೆ. ಲೆಬನಾನ್ ಸೇರಿದಂತೆ ಎಲ್ಲಾ ರಂಗಗಳಲ್ಲಿ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣವೇ ಮತ್ತು ಶಾಶ್ವತವಾಗಿ ಕೊನೆಗೊಳಿಸಲು ಉಭಯ ದೇಶಗಳು ಒಪ್ಪಿಕೊಂಡಿವೆ. ಜೂನ್ 19ರ ಶುಕ್ರವಾರದಂದು ಸ್ವಿಟ್ಜರ್ಲೆಂಡ್‌ನಲ್ಲಿ ಅಧಿಕೃತ ಸಹಿ ಸಮಾರಂಭ ನಡೆಯಲಿದೆ" ಎಂದು ತಿಳಿಸಿದ್ದಾರೆ. ಜುಲೈ ಆರಂಭದಲ್ಲಿ ಇರಾನ್‌ನ ಮಾಜಿ ಸುಪ್ರೀಂ ಲೀಡರ್ ಆಯತೊಲ್ಲಾ ಖಮೇನಿ ಅವರ ಅಂತ್ಯಕ್ರಿಯೆ ನಡೆಯಲಿದ್ದು, ಅದಕ್ಕೂ ಮುನ್ನವೇ ಈ ಕದನ ವಿರಾಮ ಜಾರಿಗೆ ಬರುತ್ತಿರುವುದು ಗಮನಾರ್ಹವಾಗಿದೆ.

Edited By :
PublicNext

PublicNext

15/06/2026 07:23 am

Cinque Terre

13.08 K

Cinque Terre

3

ಸಂಬಂಧಿತ ಸುದ್ದಿ