ಮಂಡ್ಯ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯಕ್ಕೆ ತೀವ್ರ ಹಿನ್ನಡೆಯಾಗಿದೆ. ಈ ಬಾರಿ ಪೂರ್ವ ಮುಂಗಾರು ಹಂಗಾಮಿನಲ್ಲಿ 19,395 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿತ್ತು. ಆದರೆ, ಮಳೆ ಪ್ರಮಾಣ ಕುಸಿತದಿಂದಾಗಿ ಜಿಲ್ಲೆಯಲ್ಲಿ ಈವರೆಗೂ ಕೇವಲ ಶೇ 31.8ರಷ್ಟು ಮಾತ್ರ ಬಿತ್ತನೆ ಕಾರ್ಯ ಮಾಡಲಾಗಿದ್ದು, ಕಳೆದ ವರ್ಷದ ಇದೇ ಅವಧಿಯ ಶೇ 96.5ರಷ್ಟು ಬಿತ್ತನೆಗೆ ಹೋಲಿಸಿದರೆ ಇದು ತೀರಾ ಕಡಿಮೆ. ಪ್ರಸ್ತುತ, ಉತ್ತಮ ಮಳೆಗಾಗಿ ಜಿಲ್ಲೆಯ ಅನ್ನದಾತರು ಆಕಾಶದತ್ತ ಮುಖ ಮಾಡಿ ಕಾದು ಕುಳಿತಿದ್ದಾರೆ.
Kshetra Samachara
15/06/2026 09:02 am
LOADING...