ಹುಬ್ಬಳ್ಳಿ: ಪುಡಿರೌಡಿಗಳು ಏಕಾಏಕಿಯಾಗಿ ಬೇಕರಿ ನುಗ್ಗಿ ಮಾಲೀಕನ ಮೇಲೆ ಹಲ್ಲೆ ಮಾಡಿ, ಅಂಗಡಿಯಲ್ಲಿ ವಸ್ತುಗಳನ್ನು ಧ್ವಂಸ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಹೌದು.... ನಗರದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶನಗರದ ಪವನ್ ಸ್ಕೂಲ್ ಸಮೀಪ ಇರುವ ಮಗವಿರ ಬೇಕರಿಯಲ್ಲಿ ಪುಡಾರಿಗಳು ಬೇಕರಿ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಅಂಗಡಿಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಈ ಪುಡಿ ರೌಡಿಗಳು ಬೇಕರಿ ಹೋಗಿ ಮಾಲೀಕನ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ಅವಾಚ್ಯ ಶಬ್ದದಿಂದ ನಿಂದಿಸಿ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಾರೆ. ಬೇಕರಿ ಮಾಲೀಕನಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ಕೆಲಕಾಲ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಈರಣ್ಣ ವಾಲಿಕಾರ, ಕ್ರೈಂ ಬ್ಯೂರೋ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/06/2026 09:33 am
LOADING...