ಚಾಮರಾಜನಗರ: ಯಳಂದೂರು ತಾಲೂಕಿನ ಮಸಣಾಪುರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಬಳಿದು ಅಪಮಾನ ಮಾಡಿದ ಘಟನೆಗೆ ಸಂಬಂಧಿಸಿದಂತೆ, ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಅವರು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಯುವಕನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.
ಮಹೇಶ್ ಮಾತನಾಡಿ, ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಆರೋಪಿಗಳು ಪತ್ತೆಯಾಗುವುದಿಲ್ಲ. ಆದರೆ, ಈ ಪ್ರಕರಣದಲ್ಲಿ ಗ್ರಾಮಸ್ಥರೇ ಕಿಡಿಗೇಡಿಯನ್ನು ಹಿಡಿದು 'ಧರ್ಮದೇಟು' ನೀಡಿದ್ದಾರೆ. ಹೀಗಾಗಿ, ಆತನಿಗೆ ಜಾಮೀನು ಸಿಗದಂತೆ ದೇಶದ್ರೋಹದಡಿ ಪ್ರಕರಣ ದಾಖಲಿಸಬೇಕು. ಗ್ರಾಮಸ್ಥರ ಈ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಎನ್. ಮಹೇಶ್ ತಿಳಿಸಿದರು.
Kshetra Samachara
15/06/2026 10:13 am
LOADING...