ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೇರಳದಲ್ಲಿ ಮಹಿಳೆಯರು, ತೃತೀಯಲಿಂಗಿಗಳಿಗೆ ಉಚಿತ ಬಸ್ ಪ್ರಯಾಣ: 'ಪ್ರಿಯದರ್ಶಿನಿ'ಗೆ ಚಾಲನೆ

ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳ ಸಬಲೀಕರಣಕ್ಕೆ ಕೇರಳ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ಕಲ್ಪಿಸುವ ‘ಪ್ರಿಯದರ್ಶಿನಿ’ ಯೋಜನೆಗೆ ಕೇರಳ ಸರ್ಕಾರ ಅಧಿಕೃತವಾಗಿ ಚಾಲನೆ ನೀಡಿದೆ.

ಮುಖ್ಯಮಂತ್ರಿ ವಿ. ಡಿ. ಸತೀಶನ್ ತಿರುವನಂತಪುರಂನ ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉದ್ಘಾಟಿಸಿದರು. ಉದ್ಘಾಟನಾ ಪ್ರಯಾಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ವಿಶೇಷವೆಂದರೆ, ಈ ಬಸ್ ಅನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದ್ದು ಗಮನ ಸೆಳೆಯಿತು. ಈ ‘ಪ್ರಿಯದರ್ಶಿನಿ’ ಯೋಜನೆಯಡಿ, ಮಹಿಳೆಯರು ಮತ್ತು ತೃತೀಯಲಿಂಗಿಗಳು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ನಡೆಸುವ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ರಾಜ್ಯದಾದ್ಯಂತ ಸುಮಾರು 3,125 ಸಾಮಾನ್ಯ ಬಸ್‌ಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿವೆ.

Edited By :
PublicNext

PublicNext

15/06/2026 11:55 am

Cinque Terre

6.76 K

Cinque Terre

0