ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚೆನ್ನೈ: ಇಂದು ವಿಚ್ಛೇದನ ಅರ್ಜಿ ವಿಚಾರಣೆ : ಪತ್ನಿ ಸಂಗೀತಾ ಜೊತೆ ಮತ್ತೆ ಒಂದಾಗುತ್ತಾರಾ ತಮಿಳುನಾಡು ಸಿಎಂ ವಿಜಯ್.?

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಹಾಗೂ ಅವರ ಪತ್ನಿ ಸಂಗೀತಾ ಸಲ್ಲಿಸಿರುವ ವಿಚ್ಛೇದನ ಅರ್ಜಿ ವಿಚಾರಣೆ ಇಂದು ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ನಡೆಯಲಿದೆ. ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳ ಬಳಿಕ ಈ ವಿಚಾರಣೆ ನಡೆಯುತ್ತಿರುವುದರಿಂದ ಇದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ದಂಪತಿ ರಾಜಿ ಮಾಡಿಕೊಂಡು ಮತ್ತೆ ಒಂದಾಗುತ್ತಾರೆಯೇ ಎಂಬ ಚರ್ಚೆ ರಾಜ್ಯಾದ್ಯಂತ ಜೋರಾಗಿದೆ.

ನ್ಯಾಯಾಲಯದ ನಿಯಮಗಳ ಪ್ರಕಾರ, ವಿಚ್ಛೇದನ ಪ್ರಕರಣಗಳಲ್ಲಿ ದಂಪತಿ ಪರಸ್ಪರ ಮುಖಾಮುಖಿಯಾಗಬೇಕಿದೆ. ಸಂಗೀತಾ ಅವರು ಫೆಬ್ರವರಿ 24ರಂದು ವಿಚ್ಛೇದನ ಕೋರಿ ಚೆಂಗಲ್ಪಟ್ಟು ಜಿಲ್ಲೆಯ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕಳೆದ ಏಪ್ರಿಲ್ 20ರಂದು ಅರ್ಜಿ ವಿಚಾರಣೆಗೆ ದಿನಾಂಕ ನಿಗದಿಯಾಗಿದ್ದರೂ, ವಿಜಯ್ ಮತ್ತು ಸಂಗೀತಾ ಇಬ್ಬರೂ ಹಾಜರಾಗಿರಲಿಲ್ಲ. ಬಳಿಕ, ಎರಡೂ ಕಡೆಯ ವಕೀಲರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಲು ಅನುಮತಿ ಕೋರಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಇಂದು ವಿಚಾರಣೆ ನಡೆಸಲು ದಿನಾಂಕ ನಿಗದಿಪಡಿಸಿತ್ತು.

ಇಂದಿನ ವಿಚಾರಣೆಗೆ ವಿಜಯ್ ಮತ್ತು ಸಂಗೀತಾ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ವಿಜಯ್ ಅವರು ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗುತ್ತಾರೆಯೇ ಅಥವಾ ನ್ಯಾಯಾಲಯದ ಅನುಮತಿ ಪಡೆದು ವರ್ಚುವಲ್ ವಿಧಾನದ ಮೂಲಕ ಭಾಗವಹಿಸುತ್ತಾರೆಯೇ ಎಂಬ ಬಗ್ಗೆ ತೀವ್ರ ಕುತೂಹಲ ಮೂಡಿದೆ.

Edited By :
PublicNext

PublicNext

15/06/2026 12:18 pm

Cinque Terre

8.88 K

Cinque Terre

0