ಕಲಬುರ್ಗಿಯ ಗುಲ್ಬರ್ಗ ವಿಶ್ವವಿದ್ಯಾಲಯದ ಬಿಸಿಎಂ ಸ್ನಾತಕೋತ್ತರ ವಸತಿ ನಿಲಯದಲ್ಲಿ ಹಲ್ಲಿ ಬಿದ್ದ ನೀರು ಕುಡಿದು 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಬೆಳಗ್ಗೆ ವಿದ್ಯಾರ್ಥಿಗಳು ಕುಡಿದ ನೀರಿನ ಟ್ಯಾಂಕ್‌ನಲ್ಲಿ ಹಲ್ಲಿ ಬಿದ್ದಿರುವುದು ಬೆಳಕಿಗೆ ಬಂದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ನಡೆದು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರೂ, ವಸತಿ ನಿಲಯದ ಸಿಬ್ಬಂದಿ ಅದೇ ಕಲುಷಿತ ನೀರನ್ನೇ ಅಡುಗೆಗೆ ಬಳಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ ಕೇಳಿಬಂದಿದೆ.
PublicNext
15/06/2026 12:49 pm
LOADING...