ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಂತೋಷ ಲಾಡ್‌ಗೆ ಡಿಸಿಎಂ ಸ್ಥಾನ ಕೊಡಲು ಒತ್ತಾಯ

ಧಾರವಾಡ: ಕಲಘಟಗಿ ಕ್ಷೇತ್ರದ ಶಾಸಕ ಹಾಗೂ ಸಿದ್ದರಾಮಯ್ಯ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿದ್ದ ಸಂತೋಷ ಲಾಡ್ ಅವರಿಗೆ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲೂ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನೆ ಮುಖಂಡರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು.

ಡಾ.ಬಿ.ಆರ್ ಅಂಬೇಡ್ಕರ್ ಅವರ ಮೂರ್ತಿ ಹಾಗೂ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡಿದ ದಲಿತ ಮುಖಂಡರು, ಅಲ್ಲಿಂದ ಆಲೂರು ವೆಂಕಟರಾವ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಂತೋಷ ಲಾಡ್ ಪರ ಘೋಷಣೆ ಕೂಗಿದ ಪ್ರತಿಭಟನಾಕಾರರು, ಕಾರ್ಮಿಕ ಇಲಾಖೆ ಸಚಿವರಾದ ಬಳಿಕ ಸಂತೋಷ ಲಾಡ್ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಆ ಕಾರ್ಯಗಳ ಮೂಲಕ ರಾಜ್ಯದಲ್ಲಿ ಕಾರ್ಮಿಕ ಇಲಾಖೆ ಎಂದು ತೋರಿಸಿಕೊಟ್ಟವರೇ ಲಾಡ್ ಅವರು. ಬಡವರ ಪರ ನಿರಂತರ ಕೆಲಸ ಮಾಡುವ ಸಂತೋಷ ಲಾಡ್ ಅವರಿಗೆ ಈ ಬಾರಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Edited By : Somashekar
Kshetra Samachara

Kshetra Samachara

15/06/2026 01:14 pm

Cinque Terre

5.77 K

Cinque Terre

0

ಸಂಬಂಧಿತ ಸುದ್ದಿ