ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ವಲಯದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಾಡುಹಂದಿ ಬೇಟೆಯಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ನಾರಾಯಣಹಳ್ಳಿ ಗ್ರಾಮದ ನಿವಾಸಿ ರಾಮಾಂಜಿ (೨೨) ಬಂಧಿತ ಆರೋಪಿಯಾಗಿದ್ದಾನೆ.
ಚಿಂತಾಮಣಿ ಉಪ ವಲಯ ಅರಣ್ಯಾಧಿಕಾರಿ ವೀರಭದ್ರಪ್ಪ ನೇತೃತ್ವದ ತಂಡವು ಖಚಿತ ಮಾಹಿತಿ ಮೇರೆಗೆ ಸರ್ವೇ ನಂ. 57 ರ ಅಧಿಸೂಚಿತ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಈ ದಾಳಿ ನಡೆಸಿ ಓರ್ವನನ್ನು ಬಂಧಿಸಿ ಮತ್ತೊಬ್ಬ ಆರೋಪಿ ಸಾದಲಿ ಗ್ರಾಮದ ವೆಂಕಟರಮಣ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಅರಣ್ಯ ಮೊಕದ್ದಮೆ ದಾಖಲಿಸಿದ್ದಾರೆ.
Kshetra Samachara
15/06/2026 01:46 pm
LOADING...