ಹಾವೇರಿ: ಹಾವೇರಿ ಜಿಲ್ಲಾಡಳಿತ ಭವನದಲ್ಲಿರುವ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ಪ್ರಥಮ ದರ್ಜೆ ಸಹಾಯಕ (ಎಸ್‌ಡಿಎ) ಅಕ್ಕಮ್ಮ ಎನ್. ಬಿದರೇರ್ ಅವರು, ನಿವೃತ್ತ ಪ್ರಥಮ ದರ್ಜೆ ಸಹಾಯಕ ಮಹದೇವ ಹನುಮಂತಪ್ಪ ಜೇಕಿನಕಟ್ಟಿ ಅವರ ಗುಂಪು ವಿಮಾ ಮೊತ್ತದ ಬಿಲ್ ಮಂಜೂರು ಮಾಡಲು 3,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಸೋಮವಾರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಅಕ್ಕಮ್ಮ ಬಿದರೇರ್ ಅವರನ್ನು ಯಶಸ್ವಿಯಾಗಿ ಬಲೆಗೆ ಕೆಡವಿ ಬಂಧಿಸಿದ್ದಾರೆ.
ಜಿಲ್ಲಾಡಳಿತ ಭವನದ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ, ನಿವೃತ್ತ ಪ್ರಥಮ ದರ್ಜೆ ಸಹಾಯಕ ಮಹದೇವ ಹನುಮಂತಪ್ಪ ಜೇಕಿನಕಟ್ಟಿ ಅವರಿಂದ 3,000 ರೂ. ಲಂಚದ ಹಣವನ್ನು ಅಕ್ಕಮ್ಮ ಬಿದರೇರ್ ಪಡೆದುಕೊಳ್ಳುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅವರನ್ನು ಯಶಸ್ವಿಯಾಗಿ ಬಲೆಗೆ ಕೆಡವಿ ಬಂಧಿಸಿದರು.
ಈ ಪ್ರಕರಣದ ತನಿಖೆಯನ್ನು ಕಲಬುರಗಿ-ದಾವಣಗೆರೆ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ಅವರ ಮಾರ್ಗದರ್ಶನದಲ್ಲಿ ನಡೆಸಲಾಗುತ್ತಿದೆ. ಕರ್ನಾಟಕ ಲೋಕಾಯುಕ್ತ ಹಾವೇರಿ ವಿಭಾಗದ ಪೊಲೀಸ್ ಉಪಾಧೀಕ್ಷಕ ಸಿ. ಮಧುಸೂದನ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಬಂಧಿತ ಆರೋಪಿತೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ.
PublicNext
15/06/2026 03:19 pm
LOADING...