ಚಿಕ್ಕಮಗಳೂರು: ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಕೊಲ್ಲಿಬೈಲು ಬಳಿ ನಡೆದಿದೆ.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ಕಡೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಆಟೋಗೆ ಕಡಿದಾದ ತಿರುವಿನಲ್ಲಿ ಎರಡೂ ವಾಹನಗಳು ವೇಗವಾಗಿ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮವಾಗಿ ಆಟೋದಲ್ಲಿದ್ದ ಓರ್ವ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುವನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಅಪಘಾತದ ದೃಶ್ಯಗಳು ಮೈ ಜುಂ ಎನಿಸುವಂತಿದ್ದು, ಸ್ಥಳಕ್ಕೆ ಮೂಡಿಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
15/06/2026 03:30 pm
LOADING...