ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ದಿನಬೆಳಗಾದರೆ ಸಾಕು ಒಂದಲ್ಲ ಒಂದು ಹೈಡ್ರಾಮಾಗಳು ನಡೆಯುತ್ತಲೇ ಇರುತ್ತವೆ. ಇದೀಗ ನಗರದಲ್ಲಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಲ್ಲದೆ, ಸ್ಥಳಕ್ಕೆ ಬಂದ ಪೊಲೀಸರ ಮೇಲೆಯೇ ಟ್ರಾನ್ಸ್‌ಜೆಂಡರ್ ಮಹಿಳೆಯೊಬ್ಬರು ರೇಗಾಡಿ, ಅವಾಜ್ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಮಾಹಿತಿಗಳ ಪ್ರಕಾರ, ಬೆಂಗಳೂರಿನ ರಸ್ತೆಯೊಂದರಲ್ಲಿ ಟ್ರಾನ್ಸ್‌ಜೆಂಡರ್ ಮಹಿಳೆ ಚಲಾಯಿಸುತ್ತಿದ್ದ ವಾಹನವು ಮುಂಭಾಗದಲ್ಲಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಸ್ಕೂಟರ್ ಸವಾರರು ಮಹಿಳೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಇಬ್ಬರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.
ಘಟನೆಯಿಂದಾಗಿ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪರಿಸ್ಥಿತಿಯನ್ನು ತಿಳಿಗೊಳಿಸಲು ಸ್ಥಳೀಯ ಪೊಲೀಸರು ಧಾವಿಸಿದ್ದಾರೆ. ಆದರೆ, ಪೊಲೀಸರು ಬುದ್ಧಿವಾದ ಹೇಳಲು ಬರುತ್ತಿದ್ದಂತೆ ಆಕ್ರೋಶಗೊಂಡ ಟ್ರಾನ್ಸ್‌ಜೆಂಡರ್ ಮಹಿಳೆ, ಪೊಲೀಸರ ಮೇಲೆಯೇ ತಿರುಗಿಬಿದ್ದಿದ್ದಾರೆ. "ನನ್ನ ತಪ್ಪೇನೂ ಇಲ್ಲ" ಎಂದು ವಾದಿಸುತ್ತಾ, ಸಾರ್ವಜನಿಕರ ಸಮ್ಮುಖದಲ್ಲೇ ಪೊಲೀಸರಿಗೆ ಅವಾಜ್ ಹಾಕಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದರಾದರೂ, ಮಹಿಳೆ ಮಾತ್ರ ಸ್ಥಳದಿಂದ ಕದಲದೆ ಹೈಡ್ರಾಮಾ ಸೃಷ್ಟಿಸಿದ್ದಾರೆ.
PublicNext
15/06/2026 04:27 pm
LOADING...