ಮರ್ದಾನ್ (ಪಾಕಿಸ್ತಾನ): ಪಾಕಿಸ್ತಾನದ ಖೈಬರ್ ಪಖ್ತೂನ್‌ಖ್ವಾ ಪ್ರಾಂತ್ಯದಲ್ಲಿ ಸೋಮವಾರ ಭೀಕರ ವಿಮಾನ ದುರಂತ ಸಂಭವಿಸಿದೆ. ಪಾಕಿಸ್ತಾನ ವಾಯುಪಡೆಗೆ (PAF) ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಮರ್ದಾನ್ ಜಿಲ್ಲೆಯ ಕಾಟ್ಲಾಂಗ್‌ನ ಸಾವಲ್ದೇರ್ ಪ್ರದೇಶದಲ್ಲಿ ಪತನಗೊಂಡಿದ್ದು, ಇಬ್ಬರು ಮಿಲಿಟರಿ ಪೈಲಟ್‌ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಿಯಮಿತ ತರಬೇತಿ ಹಾರಾಟದಲ್ಲಿದ್ದ (Training Sortie) ಸೂಪರ್ ಮುಶಾಕ್ ತರಬೇತಿ ವಿಮಾನವು ಹಠಾತ್ ನಿಯಂತ್ರಣ ತಪ್ಪಿ ರಸ್ತೆಯ ಮೇಲೆ ಬಿದ್ದಿದೆ. ಜನವಸತಿ ಪ್ರದೇಶದಿಂದ ವಿಮಾನವನ್ನು ದೂರ ಸಾಗಿಸಲು ಪೈಲಟ್‌ಗಳು ಕೊನೆಯ ಕ್ಷಣದವರೆಗೆ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ.
ವಿಮಾನವು ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ಭಾರಿ ಸ್ಫೋಟ ಸಂಭವಿಸಿದ್ದು, ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಮೂವರು ನಾಗರಿಕರಿಗೂ ಗಂಭೀರ ಗಾಯಗಳಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
PublicNext
15/06/2026 04:29 pm
LOADING...