ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ತೆಗ್ಗಿಹಳ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ.
ಸುರೇಶ ಸಿದ್ದಪ್ಪ ಜಂಬಗಿ ಎಂಬ ರೈತರಿಗೆ ಸೇರಿದ ಎರಡು ಎತ್ತುಗಳು ಪಾಳು ಬಿದ್ದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿವೆ. ಮೇಯಲು ಹೋಗಿದ್ದ ಎತ್ತುಗಳು ಬಾವಿಯ ಕಡೆಗೆ ತೆರಳಿದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಲಕ್ಷಾಂತರ ರೂಪಾಯಿ ಮೌಲ್ಯದ ತಮ್ಮ ಪ್ರೀತಿಯ ಎತ್ತುಗಳನ್ನು ಕಳೆದುಕೊಂಡ ರೈತ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ದುರಂತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಯಿಂದ ಎತ್ತುಗಳ ಮೃತದೇಹಗಳನ್ನು ಹೊರತೆಗೆದರು. ಈ ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
PublicNext
15/06/2026 05:05 pm
LOADING...