ಸಾಗರ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜಾರಿಗೆ ಬರಲಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಸದ್ಯ ಈ ಯೋಜನೆಗಳಲ್ಲಿ ಕೆಲವು ಲೋಪದೋಷಗಳು ಕಂಡುಬಂದಿದ್ದು, ಮರಣ ಹೊಂದಿದ ಹಲವು ವ್ಯಕ್ತಿಗಳ ಹೆಸರಿನಲ್ಲಿ ಬೇರೆಯವರು ಹಣ ಹಾಗೂ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಅನಾವಶ್ಯಕವಾಗಿ ನಷ್ಟವಾಗುತ್ತಿರುವುದನ್ನು ತಡೆಗಟ್ಟಲು ಮತ್ತು ಸೌಲಭ್ಯಗಳು ದುರುಪಯೋಗವಾಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದರು.
ಯಾವುದೇ ಕಾರಣಕ್ಕೂ ಈ ಗ್ಯಾರಂಟಿ ಯೋಜನೆಗಳನ್ನು ರದ್ದುಪಡಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಶಾಸಕರು, ಕೇವಲ ಅರ್ಹ ಮತ್ತು ನೈಜ ಫಲಾನುಭವಿಗಳಿಗೆ ಮಾತ್ರ ಯೋಜನೆ ತಲುಪಿಸುವುದು ಇದರ ಉದ್ದೇಶ ಎಂದರು. ಇನ್ಮುಂದೆ ಮತದಾರರ ಗುರುತಿನ ಚೀಟಿ (Voter ID) ಆಧಾರದ ಮೇಲೆ ಮತ್ತೊಮ್ಮೆ ಅರ್ಜಿಯನ್ನು ಪಡೆದು, ತಕ್ಷಣವೇ ಅದನ್ನು ಪರಿಶೀಲಿಸಿ ಸೌಲಭ್ಯವನ್ನು ಮುಂದುವರಿಸಲಾಗುವುದು. ಮರಣ ಹೊಂದಿದವರ ಅಥವಾ ಆ ಮನೆಯಲ್ಲಿ ಇಲ್ಲದೇ ಇರುವವರ ಹೆಸರಿನಲ್ಲಿ ಸೌಲಭ್ಯ ಪಡೆಯುವುದನ್ನು ತಡೆದು, ಶೇಕಡಾ 100 ರಷ್ಟು ನೈಜ ಅರ್ಹರಿಗೆ ಯೋಜನೆ ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.
ಜಮೀಲ್ ಸಾಗರ್ “ಪಬ್ಲಿಕ್ ನೆಕ್ಸ್ಟ್ ಸಾಗರ"
Kshetra Samachara
15/06/2026 05:46 pm
LOADING...