ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಎಲ್ಲೆಂದರಲ್ಲಿ ಕಸ ಎಸೆದ್ರೆ ಹುಷಾರ್.! - ಮನೆಗೆ ಬಂದು ದಂಡ ಹಾಕ್ತಾರೆ ಪಾಲಿಕೆ ಅಧಿಕಾರಿಗಳು

ಧಾರವಾಡ: ಧಾರವಾಡದಲ್ಲಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ಕಸ ಎಸೆಯುವವರ ವಿರುದ್ಧ ಮಹಾನಗರ ಪಾಲಿಕೆ ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದಾರೆ. ತ್ಯಾಜ್ಯದಲ್ಲಿ ಸಿಕ್ಕ ದಾಖಲೆಗಳ ಆಧಾರದ ಮೇಲೆ ಕಸ ಎಸೆದವರನ್ನು ಪತ್ತೆಹಚ್ಚಿ ದಂಡ ವಿಧಿಸಿರುವ ಘಟನೆ ಮಹಾನಗರ ಪಾಲಿಕೆ ವಲಯ ಕಚೇರಿ 2 ವ್ಯಾಪ್ತಿಯಲ್ಲಿ ನಡೆದಿದೆ.

ಹೌದು,, ಪಾಲಿಕೆ ಆಯುಕ್ತರು, ಕಾರ್ಯನಿರ್ವಾಹಕ ಅಭಿಯಂತರರು, ವಲಯ ಆಯುಕ್ತರು ಹಾಗೂ ಪರಿಸರ ಅಭಿಯಂತರರ ನಿರ್ದೇಶನದ ಮೇರೆಗೆ, ವಲಯ ಕಚೇರಿ-2ರ ಹಿರಿಯ ಆರೋಗ್ಯ ನಿರೀಕ್ಷಕ ಶಾಂತಗೌಡ ಬಿರಾದಾರ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕಿ ವಿದ್ಯಾಶ್ರೀ ಶಂಭುಲಿಂಗ ರಡ್ಡೇರ ನೇತೃತ್ವದಲ್ಲಿ ವಾರ್ಡ್ ನಂಬರ್ 14 ಮತ್ತು 7ರಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು.

ರಸ್ತೆ ಬದಿಯಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ತ್ಯಾಜ್ಯವನ್ನು ಪರಿಶೀಲಿಸಿದ ಅಧಿಕಾರಿಗಳು, ಅದರಲ್ಲಿ ದೊರೆತ ಚೀಟಿಗಳು ಹಾಗೂ ವಿಳಾಸಗಳ ಆಧಾರದ ಮೇಲೆ ಕಸ ಎಸೆದವರ ಮನೆಗಳನ್ನು ಗುರುತಿಸಿದರು. ಬಳಿಕ ಸಾರ್ವಜನಿಕರಿಗೆ ತಲಾ 3 ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದರು. ಅಷ್ಟೇ ಅಲ್ಲದೆ ಕಸ ಎಸೆದವರ ಮನೆ ಬಾಗಿಲಿಗೆ ಅವರೇ ರಸ್ತೆಯಲ್ಲಿ ಹಾಕಿದ್ದ ತ್ಯಾಜ್ಯವನ್ನು ತಂದು ಹಾಕುವ ಮೂಲಕ ಜಾಗೃತಿ ಮೂಡಿಸಲಾಯಿತು. ಇದೇ ವೇಳೆ ವಾರ್ಡ್ ನಂಬರ್ 7ರ ಮಣಿಕಿಲ್ಲ ಮುಖ್ಯ ರಸ್ತೆಯಲ್ಲಿದ್ದ ಕಸ ಎಸೆಯುತ್ತಿದ್ದ ಸ್ಥಳವನ್ನು ಸ್ವಚ್ಛಗೊಳಿಸಿ, ರಂಗೋಲಿ ಹಾಕಿ ಅಂದಗೊಳಿಸಿದರು. ಪಾಲಿಕೆ ಸಿಬ್ಬಂದಿ ಭಾಗವಹಿಸಿದ್ದರು.

Edited By : Vijay Kumar
Kshetra Samachara

Kshetra Samachara

15/06/2026 07:03 pm

Cinque Terre

2.97 K

Cinque Terre

0

ಸಂಬಂಧಿತ ಸುದ್ದಿ