ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡಕ್ಕೆ 2027ಕ್ಕೆ ಪ್ರತ್ಯೇಕ ಪಾಲಿಕೆ - ಹೋರಾಟಗಾರ ನಿಯೋಗಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಡಿಕೆಶಿ

ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ, ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ 2027 ಕ್ಕೆ ಜಾರಿಗೆ ಬರುವಂತೆ ಟಿಪ್ಪಣಿ ಬರೆದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿದ್ದಾರೆ.

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಗಾರರ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟದ ತೀವ್ರತೆ ಕುರಿತು ಹಾಗೂ ಬೇಡಿಕೆ ಕುರಿತು ಮನವರಿಕೆ ಮಾಡಿದರು.

ಮಹಾನಗರ ಪಾಲಿಕೆ ಸದಸ್ಯರ ಅಧಿಕಾರ ಅವಧಿ ಮುಗಿದ ನಂತರ ಮಾರ್ಚ್ 2027 ಕ್ಕೆ ಜನಗಣತಿ ಪ್ರಕಾರ ಜಾರಿಗೆ ಬರುವಂತೆ ಟಿಪ್ಪಣಿ ಬರೆಯುವ ಮೂಲಕ ಧಾರವಾಡ ಬಹುದಿನಗಳ ಬೇಡಿಕೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಹೋರಾಟಗಾರ ಹಾಗೂ ಹಿರಿಯ ನ್ಯಾಯವಾದಿ ಬಿ.ಡಿ ಹಿರೇಮಠ ಅವರ ನೇತೃತ್ವದಲ್ಲಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿಯ ವೆಂಕಟೇಶ ಮಾಚಕನೂರ, ವಿಠ್ಠಲ ಕಮ್ಮಾರ, ಮಾಜಿ ಸಂಸದ ಐ.ಜಿ.ಸನ್ನದಿ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ, ರಾಜಶೇಖರ ಕಮತಿ, ದಾನಪ್ಪ ಕಬ್ಬೇರ, ಗುರುರಾಜ ಹುಣಸಿಮರದ, ವೀರಣ್ಣ ಶೆಟ್ಟರ, ಮಹಿಳಾ ಕಾಂಗ್ರೆಸ್ ಧಾರವಾಡ ಜಿಲ್ಲಾಧ್ಯಕ್ಷೆ ಗೌರಮ್ಮ ಬಲೋಗಿ, ರವಿಕುಮಾರ ಮಾಳಗೇರ, ಶಂಕರ ನಿರಾವರಿ, ಸುದೀರ ಕ್ಷತ್ರಿ, ಶಕೀಲ ಸೇರಿದಂತೆ ಇತರರಿದ್ದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

15/06/2026 07:45 pm

Cinque Terre

7.66 K

Cinque Terre

0

ಸಂಬಂಧಿತ ಸುದ್ದಿ