ಶಿವಮೊಗ್ಗ: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವ ವಿಚಾರದಲ್ಲೂ ಸರ್ಕಾರ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು. ರೈತರು ಫಲವತ್ತಾದ ಭೂಮಿಯಲ್ಲಿ ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದು, ಅವರ ಭೂಮಿಯನ್ನು ಬಲವಂತವಾಗಿ ವಶಕ್ಕೆ ಪಡೆಯಬಾರದು ಎಂದು ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಪ್ರಯತ್ನಗಳ ವಿರುದ್ಧವೂ ಆಕ್ಷೇಪ ವ್ಯಕ್ತಪಡಿಸಿದ ಅವರು, ಟಾಟಾ ಕಂಪನಿಗೆ ವಿದ್ಯುತ್ ವಿತರಣೆಯ ಜವಾಬ್ದಾರಿ ನೀಡಲು ಸರ್ಕಾರ ಮುಂದಾಗಿದೆ. ಇದರಿಂದ ಸ್ಥಳೀಯರಿಗೆ ದೊರೆಯುವ ಮೀಸಲಾತಿ ಹಾಗೂ ಉದ್ಯೋಗಾವಕಾಶಗಳಿಗೆ ಧಕ್ಕೆಯಾಗಬಹುದು. ಆದ್ದರಿಂದ ವಿದ್ಯುತ್ ನಿರ್ವಹಣೆಯನ್ನು ಖಾಸಗಿ ಕಂಪನಿಗಳಿಗೆ ನೀಡಬಾರದು ಎಂದು ಒತ್ತಾಯಿಸಿದರು.
PublicNext
15/06/2026 08:13 pm
LOADING...