ವಿಜಯಪುರ: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಮರಗೂರು ಬಳಿಯ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಸಂಭವಿಸಿದೆ.
ಧರ್ಮಣ್ಣಾ ಹೊಸಮನಿ (41) ಬೀರಪ್ಪ ಪೂಜಾರಿ (25) ಮೃತ ಬೈಕ್ ಸವಾರರಾಗಿದ್ದು ಮೃತರು ಇಂಡಿ ತಾಲೂಕಿನ ಗೋರನಾಳ ಗ್ರಾಮದವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಝಳಕಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
15/06/2026 10:40 pm
LOADING...