ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಸ್ ತಂಗುದಾಣಕ್ಕೆ ರಾಜಕೀಯ ಅಡ್ಡಿ: ಶಾಸಕರ ವಿರುದ್ಧ ಬಿಜೆಪಿ ಆಕ್ರೋಶ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಆಸ್ಪತ್ರೆ ಗೇಟ್ ಬಳಿ 2023-24ನೇ ಸಾಲಿನ ಎಂಪಿ ಅನುದಾನದ 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದ ಬಸ್ ತಂಗುದಾಣಕ್ಕೆ ಅಧಿಕಾರಿಗಳೇ ಅಡ್ಡಿಪಡಿಸುತ್ತಿದ್ದಾರೆಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.

ತಹಶೀಲ್ದಾರ್ ಹಾಗೂ ಪಿಡಿಒ ರಾಜಕೀಯ ಕೈಗೊಂಬೆಗಳಾಗಿದ್ದು, ಅದೇ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟುವ ಸಬೂಬು ನೀಡುತ್ತಿದ್ದಾರೆ. ಕ್ಯಾಂಟೀನ್‌ಗೆ ಸ್ವಂತ ಜಾಗ ನೀಡುವುದಾಗಿ ತಿಳಿಸಿದರೂ ಅಧಿಕಾರಿಗಳು ಕೇಳುತ್ತಿಲ್ಲ. ಶಾಸಕ ಪ್ರದೀಪ್ ಈಶ್ವರ್ ಅವರ ರಾಜಕೀಯ ದುರುದ್ದೇಶ ಹಾಗೂ ಆಡಳಿತ ವೈಖರಿಯೇ ಇದಕ್ಕೆ ಕಾರಣ ಎಂದು ಬಿಜೆಪಿ ನಾಯಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

Edited By :
Kshetra Samachara

Kshetra Samachara

16/06/2026 09:21 am

Cinque Terre

660

Cinque Terre

0

ಸಂಬಂಧಿತ ಸುದ್ದಿ