ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ: ವಿದ್ಯಾರ್ಥಿಗಳ ಸುರಕ್ಷತೆಗೆ ಮೊದಲ ಆದ್ಯತೆ - ಶಾಸಕ ಭೀಮಣ್ಣ ನಾಯ್ಕ ಖಡಕ್ ಸೂಚನೆ

ಶಿರಸಿ: ಶಿರಸಿ-ಸಿದ್ದಾಪುರ ತಾಲೂಕಿನಾದ್ಯಂತ ಇರುವ ವಿವಿಧ ಇಲಾಖೆಗಳ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಸುರಕ್ಷತೆ, ಆರೋಗ್ಯ ಮತ್ತು ಮೂಲಭೂತ ಸೌಕರ್ಯಗಳಿಗೆ ಯಾವುದೇ ಲೋಪವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸೋಮವಾರ ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ವಸತಿಶಾಲೆ ಹಾಗೂ ವಿವಿಧ ಇಲಾಖೆಗಳ ವಸತಿ ನಿಲಯಗಳ ಮೇಲ್ವಿಚಾರಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಪಾಲಕರು ತಮ್ಮ ಮಕ್ಕಳನ್ನು ಅತ್ಯಂತ ಭರವಸೆಯಿಂದ ವಸತಿ ನಿಲಯಗಳಿಗೆ ಕಳುಹಿಸುತ್ತಾರೆ. ಅವರ ನಂಬಿಕೆಗೆ ದ್ರೋಹವಾಗದಂತೆ ಪ್ರತಿಯೊಬ್ಬ ವಿದ್ಯಾರ್ಥಿಯ ರಕ್ಷಣೆ ಮತ್ತು ಆರೋಗ್ಯದ ಜವಾಬ್ದಾರಿಯನ್ನು ವಾರ್ಡನ್‌ಗಳು ಹಾಗೂ ಇಲಾಖೆಯ ಅಧಿಕಾರಿಗಳು ಹೊರಬೇಕು ಎಂದು ಶಾಸಕರು ಖಡಕ್ ಸೂಚನೆ ನೀಡಿದರು..

ಶಿರಸಿ ಮತ್ತು ಸಿದ್ದಾಪುರ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಕ್ಷಣವೇ ತಮ್ಮ ವ್ಯಾಪ್ತಿಯ ಎಲ್ಲಾ ವಸತಿ ನಿಲಯಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನಾ ವರದಿ ಸಲ್ಲಿಸಬೇಕು ಎಂದು ಶಾಸಕರು ಕಾಲಮಿತಿ ವಿಧಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ವಸತಿ ನಿಲಯಗಳ ಮೇಲ್ವಿಚಾರಕರು (ವಾರ್ಡನ್‌ಗಳು) ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/06/2026 09:33 am

Cinque Terre

4.22 K

Cinque Terre

0

ಸಂಬಂಧಿತ ಸುದ್ದಿ