ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಾಲವ್ವನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆತಂಕಕಾರಿ ಘಟನೆ ನಡೆದಿದೆ. ಶಾಲೆಯ ಬಿಸಿಯೂಟದ ಅಡುಗೆ ಕೋಣೆಗೆ ಬೃಹತ್ ನಾಗರಹಾವು ನುಗ್ಗಿದ್ದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕೆಲಕಾಲ ಭಯಭೀತರಾಗಿದ್ದರು.
ಘಟನೆ ಬಗ್ಗೆ ಕೂಡಲೇ ಸ್ನೇಕ್ ಚಂದನ್ ಅವರಿಗೆ ಮಾಹಿತಿ ನೀಡಲಾಯಿತು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅವರು, ನಾಗರಹಾವನ್ನು ಸುರಕ್ಷಿತವಾಗಿ ಹಿಡಿದು, ನಂತರ ಕಾಡಿಗೆ ಬಿಟ್ಟಿದ್ದಾರೆ. ಇದರಿಂದ ಶಾಲೆಯಲ್ಲಿ ಉಂಟಾಗಿದ್ದ ಆತಂಕ ದೂರವಾಗಿ, ಸಹಜ ವಾತಾವರಣ ಮರಳಿತು.
PublicNext
16/06/2026 11:52 am
LOADING...