ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಕೀಲನಾಗಿ ಬರ್ತಿದ್ದಾರೆ ಅನೂಪ್ ರೇವಣ್ಣ- 'ಕನಕರಾಜ' ಚಿತ್ರದ ಮೊದಲ ಹಾಡಿಗೆ ಫ್ಯಾನ್ಸ್ ಫಿದಾ!

ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಹವಾ ಕ್ರಿಯೇಟ್ ಮಾಡ್ತಿರೋ "ಕನಕರಾಜ" ಚಿತ್ರದ ಮೊದಲ ಹಾಡು ಹಾಗೂ ಮೋಷನ್ ಪೋಸ್ಟರ್ ಇತ್ತೀಚೆಗಷ್ಟೇ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರ ಪುತ್ರ ಅನೂಪ್ ರೇವಣ್ಣ ನಾಯಕನಾಗಿ ನಟಿಸಿರೋ ಈ ಚಿತ್ರದ ಫಸ್ಟ್ ಲುಕ್‌ಗೆ ಸಿನಿರಸಿಕರು ಈಗಾಗಲೇ ಫಿದಾ ಆಗಿದ್ದಾರೆ.

ಹಿರಿಯ ನಟ ದೊಡ್ಡಣ್ಣ ಹಾಗೂ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರು ಚಿತ್ರದ ಮೋಷನ್ ಪೋಸ್ಟರ್ ಮತ್ತು ಮೊದಲ ಹಾಡನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಬೆನ್ನುತಟ್ಟಿದ್ದಾರೆ. ಈ ಚಿತ್ರಕ್ಕೆ ಸ್ಯಾಂಡಲ್‌ವುಡ್‌ನ ಖ್ಯಾತ ಸಾಹಿತಿ, ಡಾ. ವಿ. ನಾಗೇಂದ್ರ ಪ್ರಸಾದ್ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಅದ್ಭುತವಾಗಿ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇಂದಿನ ಯುವ ಪೀಳಿಗೆಗೆ ಹತ್ತಿರವಾಗುವ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ಅನೂಪ್ ರೇವಣ್ಣ ವಕೀಲನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮುಖ್ಯಮಂತ್ರಿಗಳ ಅಭಿಮಾನಿಯಾಗಿ ಅಬ್ಬರಿಸಲಿದ್ದಾರೆ. ನಾಯಕಿಯಾಗಿ ನಿಮಿಷ ನಟಿಸಿದ್ದು, ಚಿತ್ರದಲ್ಲಿ ಶ್ರೀನಾಥ್, ರಾಮಕೃಷ್ಣ, ಪದ್ಮಾವಾಸಂತಿ, ಯಮುನಾ ಶ್ರೀನಿಧಿ ಹಾಗೂ ಸುಂದರರಾಜ್ ಅವರಂತಹ ಘಟಾನುಘಟಿ ಕಲಾವಿದರ ದಂಡೇ ಇದೆ. ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್.ಆರ್. ಸನತ್ ಕುಮಾರ್ ಅವರು ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸಿದ್ದು, ಆರ್. ರವೀಂದ್ರ ಅವರು ಆಕ್ಷನ್ ಕಟ್ ಹೇಳಿದ್ದಾರೆ.

ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಮುಂದಿನ ತಿಂಗಳು ಚಿತ್ರವನ್ನು ತೆರೆಗೆ ತರಲು ಚಿತ್ರತಂಡ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿದೆ. ಸದ್ಯ ಬಿಡುಗಡೆಯಾಗಿರೋ ಮೊದಲ ಹಾಡು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆಯನ್ನು ಡಬಲ್ ಮಾಡಿದೆ.

Edited By : Vijay Kumar
PublicNext

PublicNext

16/06/2026 11:53 am

Cinque Terre

12.43 K

Cinque Terre

0