ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾಯಿ ಹೆಸರಲ್ಲಿ ಗಿಡ ನೆಟ್ಟ ಸಚಿವ ಸೋಮಣ್ಣ

ತುಮಕೂರು : ಪ್ರಧಾನಿ ನರೇಂದ್ರ ಮೋದಿಯರ ಆಡಳಿತದ 12 ನೇ ವರ್ಷದ ನೆನಪಿನಲ್ಲಿ ಕೇಂದ್ರದ ರಾಜ್ಯ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ ಅವರು ತುಮಕೂರು ಗ್ರಾಮಾಂತರ ಕ್ಷೇತ್ರದ ಬುಗುಡನಹಳ್ಳಿಯಲ್ಲಿ ತಮ್ಮ ತಾಯಿಯ ಹೆಸರಿನಲ್ಲಿ ಗಿಡ ನೆಟ್ಟರು.

ಇದಕ್ಕೂ ಮೊದಲು ತುಮಕೂರು ನಗರದ ಶ್ರೀರಾಮಮಂದಿರದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು. ಬುಗುಡನಹಳ್ಳಿಯಲ್ಲಿ ಬುದ್ಧಿಜೀವಿಗಳೊಂದಿಗೆ ಸಂವಾದ ನಡೆಸಿದರು. ಇದೇ ವೇಳೆ ಗಿಡಗಳನ್ನು ನೆಟ್ಟು ನೀರೆರೆದರು. ನಂತರ ಬೆಳ್ಳಾವಿಯ ಕಾರದೇಶ್ವರ ಮಠದ ಪೀಠಾಧ್ಯಕ್ಷರಾದ ಕಾರದ ವೀರಬಸವ ಮಹಾಸ್ವಾಮಿಜೀಗಳ ಜನ್ಮವರ್ಧಂತಿ ಪ್ರಯುಕ್ತ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಗೆ ಗೌರವ ಸಮರ್ಪಣೆ ಮಾಡಿದರು.

ಸಚಿವ ವಿ. ಸೋಮಣ್ಣನವರ ಕಾರ್ಯಕ್ರಮಗಳಲ್ಲಿ ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ, ತುಮಕೂರು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಮತ್ತಿತರ ಮುಖಂಡರು ಜೊತೆಗಿದ್ದರು.

Edited By : PublicNext Desk
Kshetra Samachara

Kshetra Samachara

16/06/2026 12:14 pm

Cinque Terre

4.28 K

Cinque Terre

0

ಸಂಬಂಧಿತ ಸುದ್ದಿ