ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ ಗೋದಾಮಿನಲ್ಲಿ ಭೀಕರ ಅಗ್ನಿ: ಎಂಟು ಸಿಲಿಂಡರ್ ಸ್ಫೋಟ - ಮೂವರ ಜೀವನ್ಮರಣ ಹೋರಾಟ!

ದಾವಣಗೆರೆ: ದಾವಣಗೆರೆ ತಾಲೂಕಿನ ಎಚ್. ಕಲ್ಪನಹಳ್ಳಿ ಗ್ರಾಮದ ಅಡಿಕೆ ತೋಟದಲ್ಲಿರುವ ಸಿಲಿಂಡರ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಎಂಟಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ.

ದೊಗ್ಗಳ್ಳಿ ಶಿವಕುಮಾರ ಅವರಿಗೆ ಸೇರಿದ ಗೋದಾಮಿನಲ್ಲಿ ಅನಿಲ್ ಎಂಬಾತ ಸಿಲಿಂಡರ್ ಸಂಗ್ರಹಾಲಯವನ್ನು ನಡೆಸುತ್ತಿದ್ದನು. ಅಗ್ನಿ ಅವಘಡ ಸಂಭವಿಸಿದಾಗ ಅನಿಲ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನಿಲ್ ಜೊತೆಗೆ, ಸಿಲಿಂಡರ್ ಏಜೆನ್ಸಿಗೆ ಸೇರಿದ ಇಬ್ಬರು ಸಿಬ್ಬಂದಿಗೂ ತೀವ್ರ ಗಾಯಗಳಾಗಿವೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ.

Edited By :
PublicNext

PublicNext

16/06/2026 12:25 pm

Cinque Terre

6.73 K

Cinque Terre

0