ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು: ಸಿಂಧನೂರಲ್ಲಿ ಅಪ್ರಾಪ್ತ ಅಕ್ಕ-ತಂಗಿಯರ ಮೇಲೆ ದೌರ್ಜನ್ಯ ; ಕಾಮುಕನ ಅರೆಸ್ಟ್

ರಾಯಚೂರು: ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಅಕ್ಕ-ತಂಗಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಎರಡನೇ ಹಾಗೂ ಮೂರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 8 ಮತ್ತು 9 ವರ್ಷದ ಬಾಲಕಿಯರ ಮೇಲೆ ಕುಟುಂಬಕ್ಕೆ ಪರಿಚಿತನಾಗಿದ್ದ ವ್ಯಕ್ತಿಯೊಬ್ಬ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಆರೋಪಿ ಬಾಬಾನ ಎಂಬಾತ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದವನಾಗಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಮಕ್ಕಳ ಪೋಷಕರು ದಿನಗೂಲಿ ಕೆಲಸಕ್ಕೆ ತೆರಳಿದ್ದ ವೇಳೆ, ಅವರು ವಾಸವಿದ್ದ ಶೆಡ್‌ಗೆ ಬಂದ ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಕ್ಕೆ ಈ ಘಟನೆ ತೀವ್ರ ಆಘಾತ ಉಂಟುಮಾಡಿದೆ.

ಸಂತ್ರಸ್ತ ಬಾಲಕಿಯರ ಕುಟುಂಬದ ದೂರಿನ ಮೇರೆಗೆ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ, ಅತ್ಯಾಚಾರ ಹಾಗೂ ಜಾತಿ ನಿಂದನೆ ಸಂಬಂಧಿತ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಸಂತ್ರಸ್ತ ಬಾಲಕಿಯರಿಗೆ ಅಗತ್ಯ ವೈದ್ಯಕೀಯ ಹಾಗೂ ಕಾನೂನು ನೆರವು ಒದಗಿಸಲಾಗುತ್ತಿದೆ. ಈ ಅಮಾನವೀಯ ಕೃತ್ಯಕ್ಕೆ ಸ್ಥಳೀಯರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

16/06/2026 12:49 pm

Cinque Terre

3.91 K

Cinque Terre

0