ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಗ್ರಾಪಂ ಅವ್ಯವಹಾರ ! ಗ್ರಾಮಸ್ಥರಿಂದ ಲೋಕಾಯುಕ್ತಕ್ಕೆ ದೂರು, ಶೀಘ್ರವೇ ತನಿಖೆ

ಹುಬ್ಬಳ್ಳಿ : ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆದಿದೆ ಎನ್ನಲಾದ 1.50 ಕೋಟಿ ಅವ್ಯವಹಾರದ ಆರೋಪ ಇದೀಗ ಲೋಕಾಯುಕ್ತ ಕಚೇರಿ ಮೆಟ್ಟಿಲು ಏರಿದೆ.

ಹೌದು ! ಹುಬ್ಬಳ್ಳಿ ತಾಲೂಕು ಪಂಚಾಯಿತಿ ವ್ಯಾಪ್ತಿಯ ಅಗಡಿ ಗ್ರಾಮ ಪಂಚಾಯಿತಿಗೆ ಒಳಪಡುವ ತಿರುಮಲಕೊಪ್ಪ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಸಾಮೂಹಿಕ ಮತ್ತು ವೈಯಕ್ತಿಕ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದರು.

ಸಿಸಿ ರಸ್ತೆ ನಿರ್ಮಾಣ, ಚರಂಡಿ ನಿರ್ಮಾಣ, ದೇವಸ್ಥಾನದ ಅಭಿವೃದ್ಧಿ, ಭೋಜನಾಲಯ ಹಣ ದುರ್ಬಳಕೆ, ಇಂಗು ಗುಂಡಿ, ದನದ ಕೊಟ್ಟಿಗೆ ನಿರ್ಮಾಣದಲ್ಲಿ ಫಲಾನುಭವಿಗಳಿಗೆ ವಂಚನೆ ಸೇರಿದಂತೆ ಹಲವಾರು ಅವ್ಯವಹಾರದ ಆರೋಪ ಕೇಳಿ ಬಂದಿದ್ದವು.

ಇದೀಗ ತಿರುಮಲಕೊಪ್ಪ ಗ್ರಾಮಸ್ಥರು ಈ ಆರೋಪದ ಆಯ್ದ ಕಾಮಗಾರಿಗಳ ದಾಖಲೆಯನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಿ ತನಿಖೆಗೆ ಆಗ್ರಹ ಮಾಡಿದ್ದು ಲೋಕಾಯುಕ್ತ ಅಧಿಕಾರಿಗಳು ಶೀಘ್ರವೇ ತನಿಖೆ ನಡೆಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

16/06/2026 02:15 pm

Cinque Terre

35.65 K

Cinque Terre

3

ಸಂಬಂಧಿತ ಸುದ್ದಿ