ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಚಳಿ ಬಿಡಿಸಿದ್ದಾರೆ. ಚಿತ್ರದುರ್ಗದ ಬಯಲು ಸೀಮೆ ಪ್ರಾಧಿಕಾರದ ಕಾರ್ಯದರ್ಶಿ ಕೃಷ್ಣನಾಯ್ಕ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಲಾಗಿದೆ. ಚಿತ್ರದುರ್ಗ ನಗರದ ಕಚೇರಿ ಮೇಲೆ ದಾಳಿ ಮಾಡಿ ಕಡತ ಪರಿಶೀಲನೆ ಮಾಡಲಾಗುತ್ತಿದೆ. ನಗರದ ತಮಟಕಲ್ಲು ರಸ್ತೆಯಲ್ಲಿರುವ ಬಯಲು ಸೀಮೆ ಪ್ರಾಧಿಕಾರ ಕಚೇರಿ ಬೆಳ್ಳಂಬೆಳಗ್ಗೆ ಲೋಕಾ ಆಫೀಸರ್ಸ್ ದಾಳಿ ಮಾಡಿದ್ದು, ಕಚೇರಿಯಲ್ಲಿನ ಕಡತ ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ನಡೆಸಿದ್ದಾರೆ. ಅಲ್ಲದೆ ದಾವಣಗೆರೆ ಸೇರಿ ಹಲವು ಕಡೆ ದಾಳಿ ಮಾಡಿದ್ದು, ದಾವಣಗೆರೆ ಲೋಕಾಯುಕ್ತ ಅಧಿಕಾರಿಗಳೇ ಚಿತ್ರದುರ್ಗ ನಗರಕ್ಕೆ ಆಗಮಿಸಿ ಪರಿಶೀಲನೆ ಮಾಡುತ್ತಿದ್ದಾರೆ.

Edited By : Shivu K
PublicNext

PublicNext

16/06/2026 04:20 pm

Cinque Terre

7.22 K

Cinque Terre

0

ಸಂಬಂಧಿತ ಸುದ್ದಿ