ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆ ಕುರಿತಾದ ನಿರ್ಧಾರಕ್ಕೆ ಸ್ವಾಗತ ; ಸಿ.ಎಸ್.ಚಂದ್ರಭೂಪಾಲ

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ದುರ್ಬಳಕೆ ತಡೆಗಾಗಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ಹಾಗೂ ಜಿಲ್ಲಾ ಫಲಾನುಭವಿಗಳಿಗೆ ಗುರುತಿನ ಚೀಟಿ ನೀಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಸ್ವಾಗತಿಸುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಸಿ. ಎಸ್. ಚಂದ್ರಭೂಪಾಲ್ ತಿಳಿಸಿದರು.

ಮಂಗಳವಾರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ, ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆಳಕಂಡ ವಿಷಯಗಳನ್ನು ಅಂಗೀಕರಿಸಿದರು.ಗೃಹಲಕ್ಷ್ಮಿ' ಯೋಜನೆಯಡಿ ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಸುಮಾರು 9,247 ಫಲಾನುಭವಿಗಳು ನಿಧನರಾಗಿದ್ದರೂ, ಅವರ ಬ್ಯಾಂಕ್ ಖಾತೆಗಳಿಗೆ ಇನ್ನೂ ಹಣ ಜಮೆ ಆಗುತ್ತಿರುವುದು ಹಾಗೂ ಅದನ್ನು ಬೇರೆಯವರು ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಅಲ್ಲದೆ, ಒಂದೇ ಮನೆಯಲ್ಲಿ ಇಬ್ಬರು ಅಥವಾ ಮೂವರು ಮಹಿಳೆಯರು ಯಜಮಾನಿಯರಾಗಿ ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳೂ ಪತ್ತೆಯಾಗಿದ್ದು, ಇಂತಹ ಪ್ರಸಂಗಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಷ್ಕರಿಸಲು ಸೂಚಿಸಲಾಗಿದೆ ಎಂದರು.

Edited By :
Kshetra Samachara

Kshetra Samachara

16/06/2026 04:20 pm

Cinque Terre

940

Cinque Terre

0

ಸಂಬಂಧಿತ ಸುದ್ದಿ