ಮಂಡ್ಯ: ಗ್ರಾಮದ ಸಮೀಪವೇ ಚಿರತೆಯೊಂದು ಪ್ರತ್ಯಕ್ಷವಾಗುವ ಮೂಲಕ ಗ್ರಾಮಸ್ಥರಲ್ಲಿ ಆತಂಕ ಹುಟ್ಟುಹಾಕಿದಂತ ಘಟನೆ ಮಂಡ್ಯದ ಪಾಂಡವಪುರದ ಕ್ಯಾತನಹಳ್ಳಿಯಲ್ಲಿ ನಡೆದಿದೆ.
ಕ್ಯಾತನಹಳ್ಳಿ ಗ್ರಾಮದ ಸಮೀಪವೇ ಈ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರೊಬ್ಬರು ಮೊಬೈಲ್ನಲ್ಲಿ ದೃಶ್ಯ ಸೆರೆ ಹಿಡಿದಿದ್ದಾರೆ. ಇನ್ನು ಚಿರತೆ ಕಾಣಿಸಿಕೊಂಡ ಹಿನ್ನೆಲೆ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದ್ದು, ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
PublicNext
16/06/2026 05:03 pm
LOADING...