ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಯುವಕನ ಪರ ನಿಂತು ಕಾಂಗ್ರೆಸ್ ನಾಯಕಿ ಆಯೇಶಾ ಸನದಿ ಎಂಬಾಕೆ ಸಂತ್ರಸ್ತ ಯುವತಿಗೆ ಜೀವ ಬೆದರಿಕೆ ಹಾಕಿದ್ದಾಳೆ. ಅಲ್ಲದೇ ಸಚಿವ ಸತೀಶ್ ಜಾರಕಿಹೊಳಿ ಹೆಸರು ಹೇಳಿ ಆರೋಪಿ ಯುವಕನ ಬೆನ್ನಿಗೆ ನಿಂತಿದ್ದಾಳೆ. ಈ ಕುರಿತು ಬೆಳಗಾವಿ ಕಾಂಗ್ರೆಸ್ ನಾಯಕಿ ಆಯೇಶಾ ಸನದಿ ವಿರುದ್ಧ ನಗರದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಯುವತಿಗೆ ಖಾನಾಪುರ ಮೂಲದ ಬದ್ರುದ್ದೀನ್ ಕಿಲ್ಲೇದಾರ್ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಈ ಹುಡುಗನ ಜೊತೆ ನೀನು ಮದುವೆ ಆಗಬಾರದು. ಇಲ್ಲವಾದರೆ ನಿನ್ನ ಖಾಸಗಿ ಕ್ಷಣದ ಫೋಟೋಗಳನ್ನು ಮಾಧ್ಯಮಕ್ಕೆ ಕೊಡ್ತೀನಿ. ಖಾಸಗಿ ಕ್ಷಣದ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡ್ತೀನಿ ಅಂತ ಬೆದರಿಕೆ ಹಾಕಿದ್ದಾಳೆ.
ಆಯೇಶಾ ಸನದಿ ಕಿರುಕುಳಕ್ಕೆ ಬೇಸತ್ತ ಯುವತಿ ಕಳೆದ ಮಂಗಳವಾರ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಈಗ ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.
ಸಚಿವ ಸತೀಶ್ ಜಾರಕಿಹೊಳಿ, ಹಾಗೂ ಅವರ ಪಿಎ ನನಗೆ ಪರಿಚಯ ಇದ್ದಾರೆ. ಪೊಲೀಸ್ ಠಾಣೆಯಲ್ಲಿ ನನ್ನ ಮಾತು ನಡೆಯುತ್ತದೆ. ಯಾವುದೇ ಕಾರಣಕ್ಕೂ ನೀನು ಯುವಕನನ್ನು ಮದುವೆ ಆಗಬಾರದು ಎಂದು ಕಾಂಗ್ರೆಸ್ ನಾಯಕಿ ಆಯೇಶಾ ಸನದಿ ಬೆದರಿಕೆ ಹಾಕುತ್ತಿದ್ದಳು. ಇದರಿಂದ ನೊಂದ ಸಂತ್ರಸ್ತ ಯುವತಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದು ಸಾವು, ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ಕೂಡಲೇ ನಮಗೆ ನ್ಯಾಯ ಒದಗಿಸುವಂತೆ ಯುವತಿಯ ಪೋಷಕರು ಸದ್ಯ ಪ್ರಕರಣ ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪೋಷಕರು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಬದ್ರುದ್ದೀನ್ ಕಿಲ್ಲೇದಾರ್ ಹಾಗೂ ಆಯೇಶಾ ಸನದಿ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
PublicNext
16/06/2026 05:18 pm
LOADING...