ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರಿನಲ್ಲಿ ರೈತ ಸಂಘದ ಬೃಹತ್ ಪ್ರೊಟೆಸ್ಟ್!

ರಾಯಚೂರು: ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ರಾಯಚೂರಿನಲ್ಲಿ ರೈತ ಸಂಘ ಪ್ರತಿಭಟನೆ ನಡೆಸಿದೆ.

ರೈತರಿಗೆ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸುವುದು, ಬಾಕಿ ಇರುವ ಮುಂಗಾರು ಜೋಳದ ಹಣವನ್ನು ಬಿಡುಗಡೆ ಮಾಡುವುದು, ನಿವೇಶನ ರಹಿತ ಬಡ ಕುಟುಂಬಗಳಿಗೆ ಹಕ್ಕುಪತ್ರ ಮತ್ತು ಮನೆ ನಿವೇಶನಗಳನ್ನು ಒದಗಿಸುವುದು ಸೇರಿದಂತೆ ವಿವಿಧ ಜನಪರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ವತಿಯಿಂದ ಟಿಪ್ಪು ಸುಲ್ತಾನ್ ಗಾರ್ಡನ್ ಬಳಿ ಬೃಹತ್ ಧರಣಿ ಸತ್ಯಾಗ್ರಹ ಇವತ್ತು ನಡೆಸಿದ್ದಾರೆ.

ಡಿಸಿ ಮನೆಯಿಂದ ರೈತರು ಬೃಹತ್ ಪ್ರತಿಭಟನೆ ರ್ಯಾಲಿ ಪ್ರಾರಂಭ ಮಾಡಿ ಟಿಪ್ಪು ಸುಲ್ತಾನ್ ಗಾರ್ಡನ್ ವರೆಗೆ ನೂರಾರು ಮಹಿಳೆಯರು ಪುರುಷ ರೈತರು ಭಾಗವಹಿಸಿ ಪ್ರತಿಭಟನೆ ನಡೆಸಿದರು.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಅಗತ್ಯ ಪ್ರಮಾಣದಲ್ಲಿ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರಗಳು ಲಭ್ಯವಾಗುತ್ತಿಲ್ಲ.

ಕೆಲವು ಕಡೆಗಳಲ್ಲಿ ಕೃತಕ ಅಭಾವ ಸೃಷ್ಟಿಸಿ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ರೈತರಿಗೆ ಎಂ.ಆರ್.ಪಿ. ದರದಲ್ಲಿ ಅಗತ್ಯ ವಸ್ತುಗಳನ್ನು ಪೂರೈಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ ದೃಶ್ಯ ಕಂಡು ಬಂತು.

Edited By : Shivu K
PublicNext

PublicNext

16/06/2026 09:18 pm

Cinque Terre

13.92 K

Cinque Terre

0