ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಗೂಡ್ಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ - ಸವಾರನಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಚಟ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಖಾಸಗಿ ಇ-ಕಾಮರ್ಸ್ ಕಂಪನಿಯ ಕೋರಿಯರ್ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ತೀವ್ರತೆ ಬೈಕ್ ಸವಾರ ಪಾಲಾಕ್ಷ ಎಂಬುವವರಿಗೆ ಬಲವಾದ ಪೆಟ್ಟು ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿವೆ.

ಡಿಕ್ಕಿಯ ರಭಸಕ್ಕೆ ಗೂಡ್ಸ್ ವಾಹನ ಪಲ್ಟಿಯಾಗಿದ್ದು ಅಪಘಾತ ನಡೆದ ತಕ್ಷಣವೇ ಸ್ಥಳದಲ್ಲಿದ್ದವರು ರಕ್ಷಣೆಗೆ ಧಾವಿಸಿದ್ದಾರೆ. ಗಾಯಾಳುವಿನ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By :
PublicNext

PublicNext

16/06/2026 10:11 pm

Cinque Terre

16.46 K

Cinque Terre

0

ಸಂಬಂಧಿತ ಸುದ್ದಿ