ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ಭೂ ಕುಸಿತ ತಡೆಯಲು ಹಾಸನ ಜಿಲ್ಲಾಡಳಿತ ಅಲರ್ಟ್!

ಹಾಸನ : ಮಳೆಗಾಲದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಭೂಕುಸಿತ ಮತ್ತು ರಸ್ತೆ ಹಾನಿ ಸಮಸ್ಯೆಗಳನ್ನು ತಡೆಗಟ್ಟಲು ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಜಿಲ್ಲಾಡಳಿತ ನಿರಂತರವಾಗಿ ಪರಿಶೀಲಿಸುತ್ತಿದ್ದು, ಸಂಭವನೀಯ ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಕಲೇಶಪುರ ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಿ, ರಾಷ್ಟ್ರೀಯ ಹೆದ್ದಾರಿ-75ರ ವಿವಿಧ ಭಾಗಗಳಲ್ಲಿ ಭೂಕುಸಿತ ತಡೆಗೆ ಸುಮಾರು 64 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಂಜರಾಬಾದ್ ಕೋಟೆ ಸಮೀಪದ ರಸ್ತೆ ಕಾಮಗಾರಿ ಉತ್ತಮವಾಗಿ ಪೂರ್ಣಗೊಂಡಿದ್ದು, ಈ ಭಾಗದಲ್ಲಿ ರಸ್ತೆ ಸಂಚಾರ ವ್ಯವಸ್ಥೆ ಸುಧಾರಿಸಿದೆ. ತಡೆಗೋಡೆಗಳು ಹಾಗೂ ಗ್ಯಾಬಿಯನ್ ವಾಲ್ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿದ್ದು, ಮಳೆಗಾಲದಲ್ಲಿ ಅಪಾಯ ಸಂಭವಿಸುವ ಪ್ರದೇಶಗಳಲ್ಲಿ ವಿಶೇಷ ಗಮನ ಹರಿಸಬೇಕಿದೆ.

ಆನೆಮಹಲ್ ಪ್ರದೇಶದಲ್ಲಿ ಕಳೆದ ವರ್ಷ ಭೂಕುಸಿತದಿಂದ ಹೆಚ್ಚಿನ ಸಮಸ್ಯೆಗಳು ಎದುರಾಗಿದ್ದವು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅಗತ್ಯ ಕಾಮಗಾರಿಗಳನ್ನು ಈಗಾಗಲೇ ಕೈಗೆತ್ತಿಕೊಂಡಿದ್ದು, ಮಳೆಗಾಲ ಆರಂಭವಾಗಿರುವುದರಿಂದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.

Edited By : Shivu K
PublicNext

PublicNext

16/06/2026 10:12 pm

Cinque Terre

14.94 K

Cinque Terre

0

ಸಂಬಂಧಿತ ಸುದ್ದಿ