ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ, ಕೋನಸಾಗರ ಹಾಗೂ ಉಡೆವು ಗ್ರಾಮಗಳಲ್ಲಿ ಸರಣಿ ಕಳ್ಳತನದಘಟನೆಗಳು ಗ್ರಾಮಸ್ಥರನ್ನು ಆತಂಕಕ್ಕೀಡು ಮಾಡಿವೆ.
ಕಳೆದ ಕೆಲವು ದಿನಗಳಿಂದ ಮನೆ ಹಾಗೂ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿರುವ ದುಷ್ಕರ್ಮಿಗಳು ಹಣ, ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚಿ ಎಸ್ಕೇಪ್ ಆಗುತ್ತಿದ್ದಾರೆ.
ತುಮಕೂರ್ಲಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ಹಣ ಮತ್ತು ಕೋನಸಾಗರ ಗ್ರಾಮದಲ್ಲಿ ಮನೆಯ ಬೀಗ ಹೊಡೆದು ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.
ಕಳ್ಳರ ಚಲನವಲನ ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿವೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಸರಣಿ ಕಳ್ಳತನಗಳಿಂದ ಭಯಗೊಂಡಿರುವ ಗ್ರಾಮಸ್ಥರು ರಾತ್ರಿ ಗಸ್ತು ಹೆಚ್ಚಿಸಿ, ಕಳ್ಳರನ್ನು ಶೀಘ್ರ ಬಂಧಿಸುವಂತೆ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
PublicNext
16/06/2026 10:41 pm
LOADING...