ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಶಾಲಾ ಬಸ್ಸಿನಲ್ಲಿದ್ದ 40 ವಿದ್ಯಾರ್ಥಿಗಳನ್ನು ಅಪಾಯದಿಂದ ರಕ್ಷಿಸಿದ ವಿದ್ಯಾರ್ಥಿಗೆ ಶಾಸಕರಿಂದ ಸನ್ಮಾನ

ಮಣಿಪಾಲ: ಮಣಿಪಾಲದ ಮಾಧವ ಕೃಪಾ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಂಶೆಲ್ ಶರುನ್ ತನ್ನ ಶಾಲಾ ಬಸ್ಸಿನ ಚಾಲಕ ಚಾಲನೆಯ ಸಂದರ್ಭದಲ್ಲಿ ಹಠಾತ್ ಅನಾರೋಗ್ಯಕ್ಕೀಡಾಗಿ ಬಸ್ ನಿಯಂತ್ರಣ ತಪ್ಪಿದಾಗ ತಕ್ಷಣ ಹ್ಯಾಂಡ್ ಬ್ರೇಕ್ ಹಾಕಿ ಭಾರೀ ಅವಘಡವನ್ನು ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದರು.

ಶಾಲಾ ಬಸ್ಸಿನಲ್ಲಿದ್ದ 40 ವಿದ್ಯಾರ್ಥಿಗಳನ್ನು ಅಪಾಯದಿಂದ ರಕ್ಷಿಸಿದ ವಿದ್ಯಾರ್ಥಿ ಅಂಶೆಲ್ ಶರುನ್ ರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಶಾಲೆಗೆ ಭೇಟಿ ನೀಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ರುಡಾಲ್ಫ್ ಡಿಸೋಜಾ, ನಗರ ಬಿಜೆಪಿ ಯುವಮೋರ್ಚದ ಅಧ್ಯಕ್ಷ ಶ್ರೀವತ್ಸ, ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷ ಡೆನಿಸ್ ಮಸ್ಕರೇನ್ಹಸ್ ಮತ್ತು ಯುವ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

17/06/2026 12:59 pm

Cinque Terre

4.09 K

Cinque Terre

0

ಸಂಬಂಧಿತ ಸುದ್ದಿ