ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ಎಲ್ಲಾ ಜಾತಿ ಜನಾಂಗದವರ ಹಿತ ಕಾಯುವ ಜವಾಬ್ದಾರಿ ನನ್ನ ಮೇಲಿದೆ - ಶಾಸಕ ಕೆ. ಸಿ ವೀರೇಂದ್ರ ಪಪ್ಪಿ

ಚಿತ್ರದುರ್ಗ : ಎಲ್ಲಾ ಜಾತಿ ಜನಾಂಗದವರ ಹಿತ ಕಾಯುವ ಜವಾಬ್ದಾರಿ ನನ್ನ ಮೇಲಿದೆ, ಆ ಒಂದು ನಿಟ್ಟಿನಲ್ಲಿ ಕ್ಷೇತ್ರದ ಎಲ್ಲಾ ಗ್ರಾಮಗಳ ಮಾಹಿತಿಯನ್ನು ಪಡೆದು ಜನರಿಗೆ ಅವಶ್ಯಕವಾಗಿ ಬೇಕಾಗಿರುವಂತಹ ಸೌಲಭ್ಯಗಳ ಮಾಹಿತಿ ಪಡೆದು ಅಭಿವೃದ್ಧಿ ಕೆಲಸಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಗುತ್ತಿದೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ತಿಳಿಸಿದರು.

ತಾಲೂಕಿನ ಸಿಂಗಾಪುರ, ಬೆಟ್ಟದ ನಾಗೇನಹಳ್ಳಿ, ಸೊಂಡೆಕೊಳ, ಕಕ್ಕೇರೆ, ಬೇಟ್ಟದ ನಾಗೇನಹಳ್ಳಿ, ಚಿತ್ರದುರ್ಗ ನಗರದ ವಿದ್ಯಾನಗರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು, ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಎಲ್ಲಾ ಹಳ್ಳಿಗಳಲ್ಲಿ ಸಿ.ಸಿ ರಸ್ತೆ, ಚರಂಡಿ, ಕುಡಿಯುವ ನೀರಿನ ವ್ಯವಸ್ಥೆಯನ್ನು ಚಾಚು ತಪ್ಪದೇ ಮಾಡಲಾಗಿದೆ, ಗ್ರಾಮ ಅಭಿವೃದ್ಧಿ ಕಾರ್ಯಗಳಿಗೂ ಸಹ ವಿಶೇಷ ಅನುದಾನ ನೀಡುವುದರ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಕೈಜೋಡಿಸಲಾಗಿದೆ ಎಂದು ಹೇಳಿದರು.

ಅಧಿಕಾರ ಶಾಶ್ವತವಲ್ಲ, ಹುಟ್ಟು-ಸಾವಿನ ನಡುವೆ ಸಿಕ್ಕಿರುವ ಅಧಿಕಾರವಧಿಯಲ್ಲಿ ಹತ್ತಾರು ಜನ ಮೆಚ್ಚುವಂತ ಕೆಲಸ ಮಾಡಬೇಕು ಎನ್ನುವ ಆಲೋಚನೆಯನ್ನು ಇಟ್ಟುಕೊಂಡಿದ್ದೇನೆ. ತಾಲ್ಲೂಕಿನಾದ್ಯಂತ ಎಲ್ಲಾ ಕಡೆ ಸಿ.ಸಿ.ರಸ್ತೆ, ಕರೆಂಟ್, ಕುಡಿಯುವ ನೀರು, ಕೆರೆ ಕಟ್ಟೆಗಳಿಗೆ ನೀರು ತುಂಬಿಸುವುದು, ಶಾಲೆ, ಆಸ್ಪತ್ರೆಗಳ ನಿರ್ಮಾಣ ಮಾಡಲಾಗಿದೆ, ಯಾವುದೇ ಕೆಲಸ ಮಾಡಲಿ ಕ್ಷೇತ್ರದ ಮತದಾರರಿಗೆ ಅನುಕೂಲವಾಗಬೇಕೆನ್ನುವ ನಿಟ್ಟಿನಲ್ಲಿ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಗ್ಯಾರೆಂಟಿ ಸಮಿತಿ ಜಿಲ್ಲಾಧ್ಯಕ್ಷ ಗಂಜಿಗಟ್ಟಿ ಶಿವಣ್ಣ, ಇಂಜಿನಿಯರ್ಗಳಾದ ವಿನಾಯಕ್, ಶರತ್, ಶಾಸಕರ ವಿಶೇಷ ಕರ್ತವ್ಯ ಅಧಿಕಾರಿ ಸತ್ಯನಾರಾಯಣ ಹಾಗೂ ಗ್ರಾಮಸ್ಥರಾದ ಮಂಜುನಾಥ್, ಶೇಖರಪ್ಪ, ರವಿಕುಮಾರ್, ಹಾಗೂ ಇತರರು ಇದ್ದರು.

Edited By :
Kshetra Samachara

Kshetra Samachara

17/06/2026 01:01 pm

Cinque Terre

740

Cinque Terre

0

ಸಂಬಂಧಿತ ಸುದ್ದಿ