ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲಿಗೌಡನಹಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ, ಬುಧವಾರ ಗ್ರೈಂಡರ್‌ನಿಂದ ವಿದ್ಯುತ್ ಪ್ರವಹಿಸಿ ನಾಲ್ಕು ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಮೃತ ದುರ್ದೈವಿ ಬಾಲಕಿಯನ್ನು ಗ್ರಾಮದ ಪುಟ್ಟಮ್ಮ ಮತ್ತು ಆನಂದ್ ದಂಪತಿಯ ಪುತ್ರಿ ಅದ್ವಿತಾ (4) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಆಟವಾಡುತ್ತಿದ್ದ ಅದ್ವಿತಾ, ನೀರು ಕುಡಿಯಲು ಅಡುಗೆ ಮನೆಗೆ ತೆರಳಿದ್ದಾಳೆ. ಈ ವೇಳೆ ಆಕಸ್ಮಿಕವಾಗಿ ಚಾಲನೆಯಲ್ಲಿದ್ದ ಗ್ರೈಂಡರ್ ಅನ್ನು ಮುಟ್ಟಿದಾಗ ತೀವ್ರವಾಗಿ ವಿದ್ಯುತ್ ಪ್ರವಹಿಸಿದೆ. ಇದರಿಂದ ಬಾಲಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾಳೆ.
ತಕ್ಷಣವೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
Kshetra Samachara
17/06/2026 01:02 pm
LOADING...