ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ: ಚಾಲಕನ ಅಜಾಗರೂಕತೆಯಿಂದ ಪಲ್ಟಿಯಾದ ಸರ್ಕಾರಿ ಬಸ್ - ಪ್ರಯಾಣಿಕರಿಗೆ ಗಾಯ

ಯಾದಗಿರಿ: ಚಾಲಕನ ಅಜಾಗರೂಕತೆಯಿಂದಾಗಿ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಆಲ್ಹಾಳ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗದ ಶಹಾಪುರ ಡಿಪೋಗೆ ಸೇರಿದ ಬಸ್ ಇದಾಗಿದ್ದು, ಕೆಂಭಾವಿಯಿಂದ ವಿಜಯಪುರದ ತಾಳಿಕೋಟೆ ಮಾರ್ಗವಾಗಿ ಸಂಚರಿಸುತ್ತಿತ್ತು. ಚಾಲಕನ ಅಜಾಗರೂಕತೆಯಿಂದಾಗಿ ಬಸ್ ಏಕಾಏಕಿ ರಸ್ತೆ ಬದಿಯ ಜಮೀನಿಗೆ ನುಗ್ಗಿ ಪಲ್ಟಿಯಾಗಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಆಂಬುಲೆನ್ಸ್‌ಗಳ ಮೂಲಕ ಕೆಂಭಾವಿ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
PublicNext

PublicNext

17/06/2026 02:42 pm

Cinque Terre

9.29 K

Cinque Terre

0